AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕರಾವಳಿ’ ಸಿನಿಮಾ ನೋಡಿ ಎಮೋಷನಲ್ ಪ್ರತಿಕ್ರಿಯೆ ನೀಡಿದ ಪ್ರೇಕ್ಷಕರು

‘ಕರಾವಳಿ’ ಸಿನಿಮಾ ನೋಡಿ ಎಮೋಷನಲ್ ಪ್ರತಿಕ್ರಿಯೆ ನೀಡಿದ ಪ್ರೇಕ್ಷಕರು

ಮದನ್​ ಕುಮಾರ್​
|

Updated on: Jul 24, 2026 | 10:35 PM

Share

ಪ್ರಜ್ವಲ್ ದೇವರಾಜ್, ರಾಜ್ ಬಿ. ಶೆಟ್ಟಿ, ಮಿತ್ರ ಮುಂತಾದವರು ನಟಿಸಿರುವ ‘ಕರಾವಳಿ’ ಸಿನಿಮಾ ಬಿಡುಗಡೆ ಆಗಿದೆ. ಈ ಸಿನಿಮಾಗೆ ಗುರುದತ್ ಗಾಣಿಗ ಅವರು ನಿರ್ದೇಶನ ಮಾಡಿದ್ದಾರೆ. ಕಂಬಳ ಕುರಿತಾದ ಕಥೆ ಈ ಸಿನಿಮಾದಲ್ಲಿ ಇದೆ. ಚಿತ್ರವನ್ನು ನೋಡಿದ ಪ್ರೇಕ್ಷಕರು ಎಮೋಷನಲ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಜ್ವಲ್ ದೇವರಾಜ್, ರಾಜ್ ಬಿ. ಶೆಟ್ಟಿ, ಮಿತ್ರ ಮುಂತಾದವರು ನಟಿಸಿರುವ ‘ಕರಾವಳಿ’ (Karavali) ಸಿನಿಮಾ ಬಿಡುಗಡೆ ಆಗಿದೆ. ಈ ಸಿನಿಮಾಗೆ ಗುರುದತ್ ಗಾಣಿಗ ಅವರು ನಿರ್ದೇಶನ ಮಾಡಿದ್ದಾರೆ. ಕಂಬಳ ಕುರಿತಾದ ಕಥೆ ಈ ಸಿನಿಮಾದಲ್ಲಿ ಇದೆ. ಚಿತ್ರವನ್ನು ನೋಡಿದ ಪ್ರೇಕ್ಷಕರು ಎಮೋಷನಲ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಅಭಿಮಾನಿಗಳು ಮಾತನಾಡಿರುವ ಈ ವಿಡಿಯೋವನ್ನು ಚಿತ್ರತಂಡದವರು ಹಂಚಿಕೊಂಡಿದ್ದಾರೆ. ‘ಕಂಬಳದ ಅನುಭವ ಚೆನ್ನಾಗಿತ್ತು. ಮಹಾವೀರ ಮತ್ತು ಮಹಾಬಲ ಎಂಬ ಎರಡು ಪಾತ್ರಗಳ ಮೇಲೆ ಈ ಸಿನಿಮಾ ನಿಂತಿದೆ. ಆ ಪಾತ್ರಗಳನ್ನು ನೋಡಿ ನಾವು ಅತ್ತಿದ್ದೇವೆ. ರಾಜ್ ಬಿ. ಶೆಟ್ಟಿ ಅವರ ಪಾತ್ರ ಒಂದು ರೀತಿಯ ಕರೆಂಟ್ ರೀತಿ ಇದೆ. ಮಧ್ಯಂತರದ ಬಳಿಕ ಸಿನಿಮಾ ಇನ್ನೂ ಚೆನ್ನಾಗಿದೆ. ಈ ಸಿನಿಮಾದ ಕಥೆಯನ್ನು ವಿಭಿನ್ನವಾಗಿ ಕಟ್ಟಿಕೊಡಲಾಗಿದೆ’ ಎಂದು ಪ್ರೇಕ್ಷಕರು ತಮ್ಮ ವಿಮರ್ಶೆ ತಿಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More