Raj B Shetty: ತುಳು ಚಿತ್ರರಂಗದಲ್ಲಿ ಹೊಸ ಪ್ರಯತ್ನ ಮಾಡಲಿದ್ದಾರೆ ರಾಜ್​ ಬಿ. ಶೆಟ್ಟಿ

Updated on: Jul 03, 2023 | 12:22 PM

ರಾಜ್ ಬಿ. ಶೆಟ್ಟಿ ಮಂಗಳೂರಿನವರು. ಅವರು ಕನ್ನಡ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ತುಳು ಸಿನಿಮಾ ನಿರ್ಮಾಣ ಮಾಡುವ ಉದ್ದೇಶ ಇಟ್ಟುಕೊಂಡಿದ್ದಾರೆ.

ತುಳು ಚಿತ್ರರಂಗದಲ್ಲಿ ಹಲವು ಸಿನಿಮಾಗಳು ತೆರೆಗೆ ಬರುತ್ತವೆ. ಇವುಗಳಲ್ಲಿ ಬಹುತೇಕವು ಹಾಸ್ಯ ಪ್ರಧಾನ ಸಿನಿಮಾ. ಅರವಿಂದ್ ಬೋಳಾರ್ ಸೇರಿ ಅನೇಕ ಕಲಾವಿದರು ಪ್ರೇಕ್ಷಕರನ್ನು ಹೊಟ್ಟೆ ಹುಣ್ಣಾಗಿಸುವಂತೆ ನಗಿಸಿದ್ದಾರೆ. ರಾಜ್ ಬಿ. ಶೆಟ್ಟಿ ಮಂಗಳೂರಿನವರು. ಅವರು ಕನ್ನಡ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ‘ಟೋಬಿ’ (Toby Movie) ಮೂಲಕ ಅವರು ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಈಗ ರಾಜ್ ಬಿ. ಶೆಟ್ಟಿ (Raj B Shetty) ಅವರು ತುಳು ಸಿನಿಮಾ ನಿರ್ಮಾಣ ಮಾಡುವ ಉದ್ದೇಶ ಇಟ್ಟುಕೊಂಡಿದ್ದಾರೆ. ‘ತುಳುವಿನಲ್ಲಿ ಸಿನಿಮಾ ಒಂದನ್ನು ನಿರ್ಮಾಣ ಮಾಡಬೇಕು ಎಂದುಕೊಂಡಿದ್ದೀನೆ. ಅಲ್ಲಿರುವ ಏಕತಾನತೆ ಬ್ರೇಕ್ ಮಾಡಬೇಕು ಅನ್ನೋದು ಉದ್ದೇಶ. ಹೀಗಾಗಿ, ಗಂಭೀರ ಕಥೆ ಇಟ್ಟುಕೊಂಡು ಸಿನಿಮಾ ಮಾಡುವ ಆಲೋಚನೆ ಇದೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More