ಡಿಕೆಶಿಗೆ ಮನವಿಗೆ ರಾಜನಾಥ್ ಸಿಂಗ್ ಒಪ್ಪಿಗೆ: ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್

Updated on: Sep 28, 2026 | 9:43 PM

ನಾಳೆ (ಸೆ.29) CWC ಸಭೆ ಹಿನ್ನೆಲೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ಇಂದು ನವದೆಹಲಿಗೆ ತೆರಳಿದ್ದು, ಈ ವೇಳೆ ದೆಹಲಿಯಲ್ಲಿ ಜಲಶಕ್ತಿ ಸಚಿವ C.R.ಪಾಟೀಲ್ ಹಾಗೂ ರಕ್ಷಣಾ ಸಚಿವರನ್ನು ಭೇಟಿಯಾಗಿ ರಾಜ್ಯದ ಮಹತ್ವದ ಯೋಜನೆಗಳ ಬಗ್ಗೆ ಚರ್ಚಿಸಿದ್ದಾರೆ. ಅಲ್ಲದೇ ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ ಜೊತೆಗೆ ಸೇನಾ ಪರೇಡ್​​​​​ ನಡೆಸಿಕೊಡಲು ಅನುಮತಿ ಕೋರಿದ್ದು, ಇದಕ್ಕೆ ರಾಜನಾಥ್ ಸಿಂಗ್ ಒಪ್ಪಿಗೆ ಸೂಚಿಸಿದ್ದಾರೆ.

ನವದೆಹಲಿ, (ಸೆಪ್ಟೆಂಬರ್ 28): ನಾಳೆ (ಸೆ.29) CWC ಸಭೆ ಹಿನ್ನೆಲೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ಇಂದು ನವದೆಹಲಿಗೆ ತೆರಳಿದ್ದು, ಈ ವೇಳೆ ದೆಹಲಿಯಲ್ಲಿ ಜಲಶಕ್ತಿ ಸಚಿವ C.R.ಪಾಟೀಲ್ ಹಾಗೂ ರಕ್ಷಣಾ ಸಚಿವರನ್ನು ಭೇಟಿಯಾಗಿ ರಾಜ್ಯದ ಮಹತ್ವದ ಯೋಜನೆಗಳ ಬಗ್ಗೆ ಚರ್ಚಿಸಿದ್ದಾರೆ. ಅಲ್ಲದೇ ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ ಜೊತೆಗೆ ಸೇನಾ ಪರೇಡ್​​​​​ ನಡೆಸಿಕೊಡಲು ಅನುಮತಿ ಕೋರಿದ್ದು, ಇದಕ್ಕೆ ರಾಜನಾಥ್ ಸಿಂಗ್ ಒಪ್ಪಿಗೆ ಸೂಚಿಸಿದ್ದಾರೆ. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆಶಿ, ಈ ಬಾರಿ ಮೈಸೂರು ದಸರಾದಲ್ಲಿ ಸೇನಾ ಪರೇಡ್ ನಡೆಸಲು ನಿರ್ಧರಿಸಲಾಗಿದ್ದು, ಈ ಸಂಬಂಧ ಮೂರು ಸೇನೆಗಳು ಭಾಗಿಯಾಗಬೇಕು ಎಂದು ಮನವಿ ಮಾಡಿದ್ದೇನೆ. ಇದಕ್ಕೆ ಅವರು ಒಪ್ಪಿದ್ದು, ದಸರಾದಲ್ಲಿ ಸೇನಾ ಪರೇಡ್ ಹಾಗೂ ಏರ್ ಶೋ ಕೂಡಾ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More