Video: 150 ಅಡಿ ಆಳದ ಬೋರ್​ವೆಲ್​ಗೆ ಬಿದ್ದ 5 ವರ್ಷದ ಬಾಲಕ

Video: 150 ಅಡಿ ಆಳದ ಬೋರ್​ವೆಲ್​ಗೆ ಬಿದ್ದ 5 ವರ್ಷದ ಬಾಲಕ

ನಯನಾ ರಾಜೀವ್
|

Updated on: Dec 10, 2024 | 11:54 AM

ಐದು ವರ್ಷದ ಬಾಲಕ ರಾಜಸ್ಥಾನದ ದೌಸಾದಲ್ಲಿ 150 ಅಡಿ ಆಳದ ಬೋರ್​ವೆಲ್​ನಲ್ಲಿ ಸಿಲುಕಿರುವ ಘಟನೆ ನಡೆದಿದೆ. ಕಲಿಖಾಡ್ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ಸಂಭವಿಸಿದ್ದು, ಆರ್ಯನ್ ಮೀನಾ ಎಂಬ ಮಗು ತನ್ನ ತಾಯಿಯೊಂದಿಗೆ ಹತ್ತಿರದ ಹೊಲಕ್ಕೆ ಹೋಗುತ್ತಿದ್ದಾಗ ಬೋರ್​ವೆಲ್​ಗೆ ಬಿದ್ದಿದೆ.

ಪೈಪ್ ಮೂಲಕ ಆಮ್ಲಜನಕವನ್ನು ಸರಬರಾಜು ಮಾಡಲಾಗುತ್ತಿದೆ ಮತ್ತು ಅವರ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಬೋರ್‌ವೆಲ್‌ಗೆ ಕ್ಯಾಮೆರಾವನ್ನು ಅಳವಡಿಸಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ರಕ್ಷಣಾ ಕಾರ್ಯಾಚರಣೆಯನ್ನು ಮುನ್ನಡೆಸುತ್ತಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಸಹ ಸಹಾಯಕ್ಕೆ ಕರೆಸಲಾಗಿದೆ.

ದೌಸಾ ಜಿಲ್ಲಾಧಿಕಾರಿ ದೇವೇಂದ್ರ ಕುಮಾರ್ ಮತ್ತು ಶಾಸಕ ದೀನದಯಾಳ್ ಬರ್ವಾ ಸೇರಿದಂತೆ ಸ್ಥಳೀಯ ಅಧಿಕಾರಿಗಳು ಸಹ ರಕ್ಷಣಾ ಕಾರ್ಯಗಳ ಮೇಲ್ವಿಚಾರಣೆಗಾಗಿ ಪೊಲೀಸರೊಂದಿಗೆ ಘಟನಾ ಸ್ಥಳದಲ್ಲಿದ್ದಾರೆ. ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿದ್ದು, ಬಾಲಕನ ಸ್ಥಿತಿಯ ಬಗ್ಗೆ ಆತಂಕದಿಂದ ಕಾಯುತ್ತಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ