ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನ ಬಿಜೆಪಿ ನಾಯಕರು ರಾಜ್ಯದ ಬಿಜೆಪಿ ಮುಖ್ಯಸ್ಥರ ಮುಂದೆಯೇ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ಘಟನೆ ವೀಡಿಯೊ ವೈರಲ್ ಆಗಿದೆ. ಇಬ್ಬರು ಬಿಜೆಪಿ ನಾಯಕರು ಇಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮದನ್ ರಾಥೋಡ್ ಅವರ ಸಮ್ಮುಖದಲ್ಲಿ ಹಿಂಸಾತ್ಮಕವಾಗಿ ಘರ್ಷಣೆ ನಡೆಸಿ ಪರಸ್ಪರ ಹೊಡೆದಾಡಿಕೊಂಡರು. ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಸಭೆ ಪ್ರಾರಂಭವಾಗುವ ಮೊದಲು ಈ ಘಟನೆ ನಡೆಯಿತು.
ಜೈಪುರ (ಫೆಬ್ರವರಿ 27): ರಾಜಸ್ಥಾನದ ಬಿಜೆಪಿ ಅಧ್ಯಕ್ಷ ಮದನ್ ರಾಥೋಡ್ ಅವರ ಎದುರಲ್ಲೇ ಇಂದು ಇಬ್ಬರು ಬಿಜೆಪಿ ನಾಯಕರು ಜಗಳವಾಡಿಕೊಂಡು, ಹೊಡೆದಾಡಿಕೊಂಡ ಘಟನೆ ನಡೆದಿದೆ. ಬಿಜೆಪಿ ಅಲ್ಪಸಂಖ್ಯಾತ ವಿಭಾಗದ ಸಭೆಯ ವೇಳೆ ಇಬ್ಬರು ಬಿಜೆಪಿ ನಾಯಕರು ತೀವ್ರ ವಾಗ್ವಾದಕ್ಕಿಳಿದು ಪರಸ್ಪರ ಹೊಡೆದಾಡಿಕೊಂಡ ವಿಡಿಯೋ ವೈರಲ್ ಆಗಿದೆ. ಬಿಜೆಪಿ ಅಲ್ಪಸಂಖ್ಯಾತ ವಿಭಾಗದ ಸಭೆಯಲ್ಲಿ ಇಬ್ಬರು ಬಿಜೆಪಿ ನಾಯಕರು ತೀವ್ರ ವಾಗ್ವಾದಕ್ಕಿಳಿದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಇಬ್ಬರು ಘರ್ಷಣೆಗೆ ಇಳಿದಾಗ, ಇತರ ಪಕ್ಷದ ಸದಸ್ಯರು ಮತ್ತು ಕಾರ್ಯಕರ್ತರು ಅವರನ್ನು ಬೇರ್ಪಡಿಸಲು ಮಧ್ಯ ಪ್ರವೇಶಿಸಬೇಕಾಯಿತು.
ರಾಜಸ್ಥಾನ ಬಿಜೆಪಿ ಮುಖ್ಯಸ್ಥ ಮದನ್ ರಾಥೋಡ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಸಭೆಯ ಸ್ಥಳಕ್ಕೆ ಆಗಮಿಸುತ್ತಿದ್ದಂತೆ, ಮಾಜಿ ಅಲ್ಪಸಂಖ್ಯಾತ ವಿಭಾಗದ ನಾಯಕ ಜಾಕಿ ಅವರನ್ನು ವೇದಿಕೆಗೆ ಕರೆದೊಯ್ದರು. ಆದರೆ, ಜಾಕಿ ವೇದಿಕೆಯ ಮೇಲೆ ಹೋಗಲು ಪ್ರಯತ್ನಿಸಿದಾಗ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಾವೇದ್ ಖುರೇಷಿ ಅವರನ್ನು ತಡೆದರು. ಇದರಿಂದ ಜಾಕಿ ಜಾವೇದ್ ಅವರಿಗೆ ಕಪಾಳಮೋಕ್ಷ ಮಾಡಿದರು. ಜಾವೇದ್ ಕೂಡ ಜಾಕಿಗೆ ಕಪಾಳಮೋಕ್ಷ ಮಾಡಿದರು. ನಂತರ ಇಬ್ಬರೂ ಸುಮಾರು 30 ರಿಂದ 40 ಸೆಕೆಂಡುಗಳ ಕಾಲ ಹೊಡೆದಾಡಿಕೊಂಡರು. ನಂತರ ಇತರ ಬಿಜೆಪಿ ನಾಯಕರು ಮಧ್ಯಪ್ರವೇಶಿಸಿ ಅವರನ್ನು ದೂರ ಕರೆದುಕೊಂಡು ಹೋದರು.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ