Video: ಮದ್ಯ ಕುಡಿದು ನಾನು ಡಾನ್ ಎನ್ನುತ್ತಾ ವಿದ್ಯಾರ್ಥಿಗಳನ್ನು ಥಳಿಸಿದ ಶಿಕ್ಷಕ
ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕನ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಈ ವೀಡಿಯೋದಲ್ಲಿ ಶಿಕ್ಷಕ ಮಧ್ಯಪಾನ ಮಾಡಿದ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೇ ಗ್ರಾಮಸ್ಥರೊಂದಿಗೆ ಅನುಚಿತವಾಗಿ ವರ್ತಿಸಿ ಬೆದರಿಕೆ ಹಾಕಿದ್ದಾರೆ. ನಾನು ಇಲ್ಲಿ ಡಾನ್, ನನಗೆ ತೊಂದರೆ ಕೊಡಬೇಡಿ ಎಂದು ಹೇಳುತ್ತಾ ವಿದ್ಯಾರ್ಥಿಗಳನ್ನು ಮನಬಂದಂತೆ ಥಳಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಶಿಕ್ಷಣ ಇಲಾಖೆ ಆರೋಪಿ ಶಿಕ್ಷಕನನ್ನು ಅಮಾನತುಗೊಳಿಸಿದೆ.
ಮಕ್ಕಳಿಗೆ ಪಾಠ ಮಾಡಿ ಒಳ್ಳೆಯ ದಾರಿಯಲ್ಲಿ ಸಾಗುವಂತೆ ಮಾಡಬೇಕಿದ್ದ ಶಿಕ್ಷಕರೇ ತಪ್ಪು ದಾರಿಯಲ್ಲಿ ನಡೆದಾಗ ಅವರಿಗೆ ಶಿಕ್ಷಿಸುವವರು ಯಾರು? ಇಲ್ಲೊಬ್ಬ ಶಿಕ್ಷಕ ಕುಡಿದ ಮತ್ತಿನಲ್ಲಿ ಶಾಲೆಗೆ ಬಂದಿದ್ದಲ್ಲದೇ ವಿದ್ಯಾರ್ಥಿಗಳನ್ನು ಹಿಗ್ಗಾಮುಗ್ಗ ಥಳಿಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕನ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಈ ವೀಡಿಯೋದಲ್ಲಿ ಶಿಕ್ಷಕ ಮಧ್ಯಪಾನ ಮಾಡಿದ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೇ ಗ್ರಾಮಸ್ಥರೊಂದಿಗೆ ಅನುಚಿತವಾಗಿ ವರ್ತಿಸಿ ಬೆದರಿಕೆ ಹಾಕಿದ್ದಾರೆ.
ನಾನು ಇಲ್ಲಿ ಡಾನ್, ನನಗೆ ತೊಂದರೆ ಕೊಡಬೇಡಿ ಎಂದು ಹೇಳುತ್ತಾ ವಿದ್ಯಾರ್ಥಿಗಳನ್ನು ಮನಬಂದಂತೆ ಥಳಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಶಿಕ್ಷಣ ಇಲಾಖೆ ಆರೋಪಿ ಶಿಕ್ಷಕನನ್ನು ಅಮಾನತುಗೊಳಿಸಿದೆ. ಈ ಕುರಿತು ಮಾಹಿತಿ ಪಡೆದ ಪಿಇಇಒ ಅವರನ್ನು ತನಿಖೆಗೆ ಕಳುಹಿಸಲಾಗಿದ್ದು, ಗ್ರಾಮಸ್ಥರು ಮತ್ತು ಸಿಬ್ಬಂದಿಯ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. ಗುಡಮಲನಿ ಬ್ಲಾಕ್‌ನ ಕುಕ್ನೋ ಕಿ ಧಾನಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ