ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್

Updated on: Nov 22, 2024 | 8:45 PM

ರಾಜಸ್ಥಾನದ ಜುಂಜುನುವಿನಲ್ಲಿ ವೈದ್ಯರ ನಿರ್ಲಕ್ಷ್ಯದ ದೊಡ್ಡ ಪ್ರಕರಣ ಬೆಳಕಿಗೆ ಬಂದಿದೆ. ಜೀವಂತ ವ್ಯಕ್ತಿಯ ಮರಣೋತ್ತರ ಪರೀಕ್ಷೆ ನಡೆಸುವಾಗ ವ್ಯಕ್ತಿ ಜೀವಂತವಾಗಿರುವುದು ಗೊತ್ತಾಗಿದೆ. ಆಡಳಿತ ಮಂಡಳಿ ಮೂವರು ವೈದ್ಯರನ್ನು ಅಮಾನತು ಮಾಡಿ ತನಿಖೆಗೆ ಆದೇಶಿಸಿದೆ.

ಜೈಪುರ: ರಾಜಸ್ಥಾನದ ಜುಂಜುನು ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿ 25 ವರ್ಷದ ಯುವಕನೊಬ್ಬ ಜಿಲ್ಲಾಸ್ಪತ್ರೆ ಚಿಕಿತ್ಸೆ ವೇಳೆ ಮೃತಪಟ್ಟಿದ್ದ. ಬಳಿಕ ಅವನ ಅಂತಿಮ ಸಂಸ್ಕಾರಕ್ಕೆ ಸಿದ್ಧತೆ ಆರಂಭವಾಯಿತು. ಎರಡು ಮೂರು ಗಂಟೆಗಳ ಕಾಲ ದೇಹವನ್ನು ಶವಾಗಾರದಲ್ಲಿ ಇರಿಸಲಾಗಿತ್ತು. ಪಂಚನಾಮ ಪ್ರಕ್ರಿಯೆ ಮುಗಿದ ನಂತರ ಅವರ ಕುಟುಂಬದವರು ಆತನ ಶವವನ್ನು ಅಂತಿಮ ವಿಧಿವಿಧಾನಗಳಿಗೆ ತೆಗೆದುಕೊಂಡು ಹೋದರು. ಆದರೆ, ಚಿತೆ ಹೊತ್ತಿ ಉರಿಯುವ ಸ್ವಲ್ಪ ಹೊತ್ತಿನ ಮೊದಲು ಆ ವ್ಯಕ್ತಿಯ ದೇಹದಲ್ಲಿ ಕದಲಿಕೆ ಕಂಡಿತು. ಆಗ ಆತ ಜೀವಂತವಾಗಿರುವುದು ಗೊತ್ತಾಯಿತು. ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಈ ಗಂಭೀರ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕೂಡ ತಂಡ ರಚಿಸಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More