AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ರಾಜಸ್ಥಾನದಲ್ಲಿ ಹೊತ್ತಿ ಉರಿದ ಸ್ಲೀಪರ್ ಬಸ್, ಮೂವರು ಸಾವು

Video: ರಾಜಸ್ಥಾನದಲ್ಲಿ ಹೊತ್ತಿ ಉರಿದ ಸ್ಲೀಪರ್ ಬಸ್, ಮೂವರು ಸಾವು

ನಯನಾ ರಾಜೀವ್
|

Updated on: Aug 12, 2025 | 12:46 PM

Share

ಸ್ಲೀಪರ್ ಬಸ್ ಬೈಕ್​​ಗೆ ಡಿಕ್ಕಿ ಹೊಡೆದ ಪರಿಣಾಮ, ಬಸ್​​ಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನದ ಜಾಲೋರ್ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಸ್ಲೀಪರ್ ಬಸ್ ಬೈಕ್​​ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಅಪಘಾತದ ಪರಿಣಾಮ ಬಸ್ ಕೆಲವೇ ಸೆಕೆಂಡುಗಳಲ್ಲಿ ಬೆಂಕಿ ಹೊತ್ತಿಕೊಂಡಿತು. ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಬಸ್‌ನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಸುಟ್ಟಗಾಯಗಳಾಗಿದ್ದು, ಅವರನ್ನು ಪಕ್ಕದಲ್ಲಿದ್ದವರು ಹೇಗೋ ಹೊರಗೆಳೆದು ರಕ್ಷಿಸಿದ್ದಾರೆ.

ರಾಜಸ್ಥಾನ, ಆಗಸ್ಟ್ 12: ಸ್ಲೀಪರ್ ಬಸ್ ಬೈಕ್​​ಗೆ ಡಿಕ್ಕಿ ಹೊಡೆದ ಪರಿಣಾಮ, ಬಸ್​​ಗೆ ಬೆಂಕಿಗಾಹುತಿಯಾಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನದ ಜಾಲೋರ್ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಸ್ಲೀಪರ್ ಬಸ್ ಬೈಕ್​​ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಅಪಘಾತದ ಪರಿಣಾಮ ಬಸ್ ಕೆಲವೇ ಸೆಕೆಂಡುಗಳಲ್ಲಿ ಬೆಂಕಿ ಹೊತ್ತಿಕೊಂಡಿತು.

ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಬಸ್‌ನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಸುಟ್ಟಗಾಯಗಳಾಗಿದ್ದು, ಅವರನ್ನು ಪಕ್ಕದಲ್ಲಿದ್ದವರು ಹೇಗೋ ಹೊರಗೆಳೆದು ರಕ್ಷಿಸಿದ್ದಾರೆ. ಜಿಲ್ಲೆಯ ಸಂಚೋರ್ ಉಪವಿಭಾಗದ ರಾಷ್ಟ್ರೀಯ ಹೆದ್ದಾರಿ-68 ರಲ್ಲಿ ಈ ಅಪಘಾತ ಸಂಭವಿಸಿದೆ. ವಿಡಿಯೋದಲ್ಲಿ ಬಸ್ ಹೊತ್ತಿ ಉರಿಯುತ್ತಿರುವುದನ್ನು ಕಾಣಬಹುದು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ