IPL 2025: ಒಂದೇ ಒಂದು ರನ್ ಓಡದೆ 40 ರನ್ ಚಚ್ಚಿದ ವೈಭವ್; ವಿಡಿಯೋ
Vaibhav Suryavanshi's Explosive Innings: ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ 14 ವರ್ಷದ ವೈಭವ್ ಸೂರ್ಯವಂಶಿ ಅದ್ಭುತ ಪ್ರದರ್ಶನ ನೀಡಿದರು. ಅವರು ಕೇವಲ 15 ಎಸೆತಗಳಲ್ಲಿ 40 ರನ್ ಗಳಿಸಿದರು, ಇದರಲ್ಲಿ ಯಾವುದೇ ಸಿಂಗಲ್ ಅಥವಾ ಡಬಲ್ ಇರಲಿಲ್ಲ. ಅವರ ಆಟದಲ್ಲಿ 4 ಬೌಂಡರಿ ಮತ್ತು 4 ಸಿಕ್ಸರ್‌ಗಳು ಸೇರಿವೆ.
ಐಪಿಎಲ್ 2025 ರ 59ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್, ರಾಜಸ್ಥಾನಕ್ಕೆ 220 ರನ್‌ಗಳ ಗುರಿ ನೀಡಿತು. ಇದಕ್ಕೆ ಪ್ರತಿಕ್ರಿಯೆಯಾಗಿ ಗುರಿ ಬೆನ್ನಟ್ಟಿದ ರಾಜಸ್ಥಾನಕ್ಕೆ ಆರಂಭಿಕರಾದ ಯಶಸ್ವಿ ಜೈಸ್ವಾಲ್ ಮತ್ತು 14 ವರ್ಷದ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದರು.
ವೈಭವ್ ಸ್ಫೋಟಕ ಬ್ಯಾಟಿಂಗ್
ಈ ಐಪಿಎಲ್‌ನಲ್ಲಿ ಶತಕ ಸಾಧನೆ ಮಾಡಿದ ವೈಭವ್ ಸೂರ್ಯವಂಶಿ ಈ ಪಂದ್ಯದಲ್ಲಿ ಕೇವಲ 15 ಎಸೆತಗಳಲ್ಲಿ 40 ರನ್‌ಗಳ ಅಬ್ಬರದ ಇನ್ನಿಂಗ್ಸ್ ಆಡಿದರು. ಈ ಇನ್ನಿಂಗ್ಸ್‌ನ ವಿಶೇಷವೆಂದರೆ ವೈಭವ್ ಒಂದೇ ಒಂದು ಸಿಂಗಲ್ ಅಥವಾ ಡಬಲ್ ತೆಗೆದುಕೊಳ್ಳಲಿಲ್ಲ. ಬದಲಾಗಿ, ಎಲ್ಲಾ ರನ್‌ಗಳನ್ನು ಸಿಕ್ಸರ್ ಮತ್ತು ಬೌಂಡರಿಗಳ ಸಹಾಯದಿಂದ ಕಲೆಹಾಕಿದರು. ವೈಭವ್ ತಮ್ಮ ಇನ್ನಿಂಗ್ಸ್‌ನಲ್ಲಿ 4 ಬೌಂಡರಿ ಮತ್ತು 4 ಸಿಕ್ಸರ್‌ಗಳನ್ನು ಬಾರಿಸಿದರು.