Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 6,6,6,6,6...; ಪಂಜಾಬ್ ವಿರುದ್ಧ ಸ್ಫೋಟಕ ಅರ್ಧಶತಕ ಸಿಡಿಸಿದ ಜೈಸ್ವಾಲ್; ವಿಡಿಯೋ

IPL 2025: 6,6,6,6,6…; ಪಂಜಾಬ್ ವಿರುದ್ಧ ಸ್ಫೋಟಕ ಅರ್ಧಶತಕ ಸಿಡಿಸಿದ ಜೈಸ್ವಾಲ್; ವಿಡಿಯೋ

ಪೃಥ್ವಿಶಂಕರ
|

Updated on:Apr 05, 2025 | 10:27 PM

Yashasvi Jaiswal's Explosive 67: ಮೂರು ಪಂದ್ಯಗಳಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ್ದ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್, ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಅದ್ಭುತ ಅರ್ಧಶತಕ (67 ರನ್) ಗಳಿಸಿ ಟೀಕಾಕಾರರನ್ನು ಮೌನಗೊಳಿಸಿದರು. 45 ಎಸೆತಗಳಲ್ಲಿ 148.89ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ಜೈಸ್ವಾಲ್ ಅವರ ಈ ಇನ್ನಿಂಗ್ಸ್‌ನಲ್ಲಿ 5 ಸಿಕ್ಸರ್ ಮತ್ತು 3 ಬೌಂಡರಿಗಳಿದ್ದವು.

ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್​ಗೆ ಈ ಬಾರಿಯ ಐಪಿಎಲ್‌ನಲ್ಲಿ ಆಡಿದ ಮೊದಲ 3 ಪಂದ್ಯಗಳಲ್ಲಿ ವಿಶೇಷವಾಗಿ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ. ಈ 3 ಪಂದ್ಯಗಳಲ್ಲಿ ಯಶಸ್ವಿ ದೊಡ್ಡ ಇನ್ನಿಂಗ್ಸ್ ಮಾಡಲು ವಿಫಲರಾದರು. ಆದರೆ ಪಂಜಾಬ್ ಕಿಂಗ್ಸ್ ವಿರುದ್ಧದ 4ನೇ ಪಂದ್ಯದಲ್ಲಿ ಅರ್ಧಶತಕ ಗಳಿಸುವ ಮೂಲಕ ಯಶಸ್ವಿ ಟೀಕಾಕಾರರಿಗೆ ತಕ್ಕ ಉತ್ತರ ನೀಡಿದ್ದಾರೆ.

ಯಶಸ್ವಿ ಪಂಜಾಬ್ ವಿರುದ್ಧ 45 ಎಸೆತಗಳಲ್ಲಿ 148.89 ಸ್ಟ್ರೈಕ್ ರೇಟ್‌ನಲ್ಲಿ 67 ರನ್ ಗಳಿಸಿದರು. ಯಶಸ್ವಿ ಕೇವಲ 8 ಎಸೆತಗಳಲ್ಲಿ ಬೌಂಡರಿ ಮತ್ತು ಒಂದು ಸಿಕ್ಸರ್ ನೆರವಿನಿಂದ 42 ರನ್ ಗಳಿಸಿದರು. ಜೈಸ್ವಾಲ್ ಅವರ ಈ ಇನ್ನಿಂಗ್ಸ್​ನಲ್ಲಿ 5 ಸಿಕ್ಸರ್‌ ಮತ್ತು 3 ಬೌಂಡರಿಗಳು ಸೇರಿದ್ದವು. ಇದಲ್ಲದೆ ಜೈಸ್ವಾಲ್, ನಾಯಕ ಸಂಜು ಸ್ಯಾಮ್ಸನ್ ಅವರೊಂದಿಗೆ 89 ರನ್‌ಗಳ ಆರಂಭಿಕ ಪಾಲುದಾರಿಕೆಯನ್ನು ನೀಡುವ ಮೂಲಕ ರಾಜಸ್ಥಾನಕ್ಕೆ ಅದ್ಭುತ ಆರಂಭವನ್ನು ನೀಡಿದರು. ಜೈಸ್ವಾಲ್ ಅವರ ಆಟದಿಂದ ರಾಜಸ್ಥಾನ ತಂಡ 20 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 204 ರನ್ ಗಳಿಸಿತು

Published on: Apr 05, 2025 10:26 PM