Video: ಟ್ರ್ಯಾಕ್ಟರ್ ಹಿಂದಿಕ್ಕಲು ಹೋಗಿ ನಾಲ್ಕು ಬಾರಿ ಪಲ್ಟಿಯಾದ ಕಾರು

Updated on: Nov 28, 2025 | 12:55 PM

ಟ್ರ್ಯಾಕ್ಟರ್ ಹಿಂದಿಕ್ಕಲು ಹೋಗಿ ಕಾರೊಂದು ನಾಲ್ಕು ಬಾರಿ ಪಲ್ಟಿಯಾಗಿರುವ ಘಟನೆ ರಾಜಸ್ಥಾನದ ಬಿಕಾನೇರ್​ನಲ್ಲಿ ನಡೆದಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಚಾಲಕ ನಿಯಂತ್ರಣ ತಪ್ಪಿದ ಕಾರಣ ಅಪಘಾತ ಸಂಭವಿಸಿದೆ. ವೀಡಿಯೊದಲ್ಲಿ ಹಿಂದಿನಿಂದ ವೇಗವಾಗಿ ಬಂದ ಬಿಳಿ ಬಣ್ಣದ ಸ್ಕಾರ್ಪಿಯೋ ಟ್ರ್ಯಾಕ್ಟರ್ ಅನ್ನು ಹಿಂದಿಕ್ಕುವ ಪ್ರಯತ್ನದಲ್ಲಿ ನಾಲ್ಕು ಬಾರಿ ಉರುಳಿ ಬಿದ್ದಿರುವುದನ್ನು ಕಾಣಬಹುದು. ವೈರಲ್ ಆಗಿರುವ ಕ್ಲಿಪ್‌ನಲ್ಲಿ ಧೂಳಿನ ಬೃಹತ್ ರಾಶಿಯನ್ನು ಸಹ ಕಾಣಬಹುದು. ಅಪಘಾತದಲ್ಲಿ ಕಾರಿನ ಚಾಲಕ ಬದುಕಿದ್ದಾರೆಯೇ ಇಲ್ಲವೇ ಎಂಬುದು ತಿಳಿದುಬಂದಿಲ್ಲ, ರಸ್ತೆಯಲ್ಲಿ ಆ ಸಮಯಕ್ಕೆ ಯಾರೂ ಇರಲಿಲ್ಲ.

ಬಿಕಾನೇರ್, ನವೆಂಬರ್ 28: ಟ್ರ್ಯಾಕ್ಟರ್ ಹಿಂದಿಕ್ಕಲು ಹೋಗಿ ಕಾರೊಂದು ನಾಲ್ಕು ಬಾರಿ ಪಲ್ಟಿಯಾಗಿರುವ ಘಟನೆ ರಾಜಸ್ಥಾನದ ಬಿಕಾನೇರ್​ನಲ್ಲಿ ನಡೆದಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಚಾಲಕ ನಿಯಂತ್ರಣ ತಪ್ಪಿದ ಕಾರಣ ಅಪಘಾತ ಸಂಭವಿಸಿದೆ. ವೀಡಿಯೊದಲ್ಲಿ ಹಿಂದಿನಿಂದ ವೇಗವಾಗಿ ಬಂದ ಬಿಳಿ ಬಣ್ಣದ ಸ್ಕಾರ್ಪಿಯೋ ಟ್ರ್ಯಾಕ್ಟರ್ ಅನ್ನು ಹಿಂದಿಕ್ಕುವ ಪ್ರಯತ್ನದಲ್ಲಿ ನಾಲ್ಕು ಬಾರಿ ಉರುಳಿ ಬಿದ್ದಿರುವುದನ್ನು ಕಾಣಬಹುದು. ವೈರಲ್ ಆಗಿರುವ ಕ್ಲಿಪ್‌ನಲ್ಲಿ ಧೂಳಿನ ಬೃಹತ್ ರಾಶಿಯನ್ನು ಸಹ ಕಾಣಬಹುದು. ಅಪಘಾತದಲ್ಲಿ ಕಾರಿನ ಚಾಲಕ ಬದುಕಿದ್ದಾರೆಯೇ ಇಲ್ಲವೇ ಎಂಬುದು ತಿಳಿದುಬಂದಿಲ್ಲ, ರಸ್ತೆಯಲ್ಲಿ ಆ ಸಮಯಕ್ಕೆ ಯಾರೂ ಇರಲಿಲ್ಲ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More