‘ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ’: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಚೈತ್ರಾ ಕುಂದಾಪುರ ಅವರ ಬಗ್ಗೆ ಬಹುತೇಕರಿಗೆ ಅಸಮಾಧಾನ ಇದೆ. ಈ ಬಗ್ಗೆ ಕಿಚ್ಚ ಸುದೀಪ್ ಎದುರಲ್ಲೇ ಚರ್ಚೆ ಆಗಿದೆ. ಬೇಕಂತಲೇ ಚೈತ್ರಾ ಕುಂದಾಪುರ ನಾಟಕ ಮಾಡುತ್ತಾರೆ ಎಂಬ ಅಭಿಪ್ರಾಯ ಅನೇಕರದ್ದು. ಡಿಸೆಂಬರ್ 22ರ ಸಂಚಿಕೆಯಲ್ಲಿ ಕೂಡ ಇದೇ ವಿಷಯ ಚರ್ಚೆ ಆಗಲಿದೆ. ಅದರ ಪ್ರೋಮೋವನ್ನು ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.
ಚೈತ್ರಾ ಕುಂದಾಪುರ ಹೇಗೆಲ್ಲ ನಡೆದುಕೊಳ್ಳುತ್ತಾರೆ ಎಂಬುದನ್ನು ರಜತ್ ವಿವರಿಸಿದ್ದಾರೆ. ಚೈತ್ರಾ ಅವರ ನಾಟಕ ಯಾವ ರೀತಿ ಇರುತ್ತದೆ ಎಂದು ರಜತ್ ಅಭಿನಯಿಸಿ ತೋರಿಸಿದ್ದಾರೆ. ಭಾನುವಾರದ ಸಂಚಿಕೆಯಲ್ಲಿ ಸುದೀಪ್ ಎದುರು ಈ ವಿಷಯ ಚರ್ಚೆಗೆ ಬರಲಿದೆ. ಸಂಚಿಕೆಯ ಪ್ರೋಮೋ ಇಲ್ಲಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 11’ ಶೋ ಈಗ ರೋಚಕ ಹಂತವನ್ನು ತಲುಪಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos