‘ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ’: ಕಿಚ್ಚನ ಎದುರಲ್ಲೇ ಹೇಳಿದ ರಜತ್

Updated on: Dec 22, 2024 | 4:21 PM

ಚೈತ್ರಾ ಕುಂದಾಪುರ ಅವರ ಬಗ್ಗೆ ಬಹುತೇಕರಿಗೆ ಅಸಮಾಧಾನ ಇದೆ. ಈ ಬಗ್ಗೆ ಕಿಚ್ಚ ಸುದೀಪ್ ಎದುರಲ್ಲೇ ಚರ್ಚೆ ಆಗಿದೆ. ಬೇಕಂತಲೇ ಚೈತ್ರಾ ಕುಂದಾಪುರ ನಾಟಕ ಮಾಡುತ್ತಾರೆ ಎಂಬ ಅಭಿಪ್ರಾಯ ಅನೇಕರದ್ದು. ಡಿಸೆಂಬರ್​ 22ರ ಸಂಚಿಕೆಯಲ್ಲಿ ಕೂಡ ಇದೇ ವಿಷಯ ಚರ್ಚೆ ಆಗಲಿದೆ. ಅದರ ಪ್ರೋಮೋವನ್ನು ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿದೆ.

ಚೈತ್ರಾ ಕುಂದಾಪುರ ಹೇಗೆಲ್ಲ ನಡೆದುಕೊಳ್ಳುತ್ತಾರೆ ಎಂಬುದನ್ನು ರಜತ್ ವಿವರಿಸಿದ್ದಾರೆ. ಚೈತ್ರಾ ಅವರ ನಾಟಕ ಯಾವ ರೀತಿ ಇರುತ್ತದೆ ಎಂದು ರಜತ್ ಅಭಿನಯಿಸಿ ತೋರಿಸಿದ್ದಾರೆ. ಭಾನುವಾರದ ಸಂಚಿಕೆಯಲ್ಲಿ ಸುದೀಪ್ ಎದುರು ಈ ವಿಷಯ ಚರ್ಚೆಗೆ ಬರಲಿದೆ. ಸಂಚಿಕೆಯ ಪ್ರೋಮೋ ಇಲ್ಲಿದೆ. ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಶೋ ಈಗ ರೋಚಕ ಹಂತವನ್ನು ತಲುಪಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More