ಎದುರಾಳಿಗಳನ್ನು ಹಣ್ಣುಗಾಯಿ ನೀರುಗಾಯಿ ಮಾಡುವ ಶಪಥ ಮಾಡಿದ ರಜತ್

Updated on: Dec 25, 2024 | 8:26 AM

‘ಬಿಗ್ ಬಾಸ್ ಮನೆಯಲ್ಲಿ ರಜತ್ ಅವರು ಸಕತ್ ಟಫ್ ಕಾಂಪಿಟೇಟರ್ ಆಗಿದ್ದಾರೆ. ಅವರು ಮಾತಿನ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಈಗ ರಜತ್ ಅವರು ಒಂದು ಶಪಥ ಮಾಡಿದ್ದಾರೆ. ಇದರಿಂದ ಎದುರಾಳಿಗಳಲ್ಲಿ ನಡುಕ ಹುಟ್ಟುವ ಎಲ್ಲಾ ಸಾಧ್ಯತೆ ದಟ್ಟವಾಗಿದೆ. ಈ ಪ್ರೋಮೋ ಗಮನ ಸೆಳೆದಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ರಜತ್ ಅವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟವರು. ಅವರಿಗೆ ಬಿಸಿ ಮುಟ್ಟಿಸುವ ಪ್ರಯತ್ನ ಮಾಡಿದರೆ ಅವರು ತಿರುಗೇಟು ನೀಡಲು ಎಂದಿಗೂ ಹಿಂದೇಟು ಹಾಕಿದವರಲ್ಲ. ಈಗ ಅವರು  ಎದುರಾಳಿಗಳನ್ನು ಹಣ್ಣುಗಾಯಿ ನೀರುಗಾಯಿ ಮಾಡುವ ಶಪಥ ಮಾಡಿದ್ದಾರೆ. ಈ ಪ್ರೋಮೋ ಗಮನ ಸೆಳೆದಿದೆ. ಬಿಗ್ ಬಾಸ್ ಮನೆ ರೆಸಾರ್ಟ್ ಆಗಿ ಮಾರ್ಪಟ್ಟಿದ್ದು ವಿವಿಧ ರೀತಿಯ ಟಾಸ್ಕ್​ಗಳನ್ನು ನೀಡಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More