ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ? ವಿವರಿಸಿದ ಲಾಯರ್
ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ವಿನಯ್ ಗೌಡ ಮತ್ತು ರಜತ್ ಕಿಶನ್ ಅವರಿಗೆ ಜಾಮೀನು ಸಿಕ್ಕಿದೆ. ಈ ಬಗ್ಗೆ ಲಾಯರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವು ಷರತ್ತುಗಳನ್ನು ವಿಧಿಸಿ ಜಾಮೀನು ನೀಡಲಾಗಿದೆ. ಆ ಬಗ್ಗೆ ವಕೀಲರು ವಿವರ ನೀಡಿದ್ದಾರೆ. ರಜತ್ ಹಾಗೂ ವಿನಯ್ ಯಾವಾಗ ರಿಲೀಸ್ ಆಗುತ್ತಾರೆ ಎಂಬುದನ್ನು ಕೂಡ ಲಾಯರ್ ತಿಳಿಸಿದ್ದಾರೆ.
ರಜತ್ ಕಿಶನ್ ಮತ್ತು ವಿನಯ್ ಗೌಡ (Vinay Gowda ) ಅವರು ನಿಟ್ಟುಸಿರು ಬಿಟ್ಟಿದ್ದಾರೆ. ನಿಷೇಧಿತ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿ ಜೈಲಿಗೆ ಹೋಗಿದ್ದ ಅವರಿಗೆ ಜಾಮೀನು (Bail) ನೀಡಲಾಗಿದೆ. ಇಂದು (ಮಾರ್ಚ್ 28) ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಅವರ ಪರ ವಕೀಲರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಈ ರೀತಿಯ ಕೃತ್ಯ ಮಾಡಬಾರದು ಹಾಗೂ ಸಾಕ್ಷಿ ನಾಶ ಮಾಡಬಾರದು ಎಂಬ ಷರತ್ತು ಹಾಕಲಾಗಿದೆ’ ಎಂದು ವಕೀಲರು ಹೇಳಿದ್ದಾರೆ. ಜೈಲಿನ ಪ್ರಕ್ರಿಯೆಗಳು ಮುಗಿದ ಕೂಡಲೇ ರಜತ್ (Rajath Kishan) ಮತ್ತು ವಿನಯ್ ಬಿಡುಗಡೆ ಆಗಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.