ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ? ವಿವರಿಸಿದ ಲಾಯರ್

Updated on: Mar 28, 2025 | 7:01 PM

ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ವಿನಯ್ ಗೌಡ ಮತ್ತು ರಜತ್ ಕಿಶನ್ ಅವರಿಗೆ ಜಾಮೀನು ಸಿಕ್ಕಿದೆ. ಈ ಬಗ್ಗೆ ಲಾಯರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವು ಷರತ್ತುಗಳನ್ನು ವಿಧಿಸಿ ಜಾಮೀನು ನೀಡಲಾಗಿದೆ. ಆ ಬಗ್ಗೆ ವಕೀಲರು ವಿವರ ನೀಡಿದ್ದಾರೆ. ರಜತ್ ಹಾಗೂ ವಿನಯ್ ಯಾವಾಗ ರಿಲೀಸ್ ಆಗುತ್ತಾರೆ ಎಂಬುದನ್ನು ಕೂಡ ಲಾಯರ್ ತಿಳಿಸಿದ್ದಾರೆ.

ರಜತ್ ಕಿಶನ್ ಮತ್ತು ವಿನಯ್ ಗೌಡ (Vinay Gowda ) ಅವರು ನಿಟ್ಟುಸಿರು ಬಿಟ್ಟಿದ್ದಾರೆ. ನಿಷೇಧಿತ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿ ಜೈಲಿಗೆ ಹೋಗಿದ್ದ ಅವರಿಗೆ ಜಾಮೀನು (Bail) ನೀಡಲಾಗಿದೆ. ಇಂದು (ಮಾರ್ಚ್​ 28) ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಅವರ ಪರ ವಕೀಲರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಈ ರೀತಿಯ ಕೃತ್ಯ ಮಾಡಬಾರದು ಹಾಗೂ ಸಾಕ್ಷಿ ನಾಶ ಮಾಡಬಾರದು ಎಂಬ ಷರತ್ತು ಹಾಕಲಾಗಿದೆ’ ಎಂದು ವಕೀಲರು ಹೇಳಿದ್ದಾರೆ. ಜೈಲಿನ ಪ್ರಕ್ರಿಯೆಗಳು ಮುಗಿದ ಕೂಡಲೇ ರಜತ್ (Rajath Kishan) ಮತ್ತು ವಿನಯ್ ಬಿಡುಗಡೆ ಆಗಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More