ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಬಿಗ್ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ ಮತ್ತು ರಜತ್ ಅವರಿಗೆ ಈಗ ಸಂಕಷ್ಟ ಜಾಸ್ತಿ ಆಗಿದೆ. ಇಬ್ಬರನ್ನೂ ಬಸವೇಶ್ವರ ನಗರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಂಗಳವಾರ (ಮಾರ್ಚ್ 25) ಮಹಜರು ಮುಗಿದ ನಂತರ 4 ಗಂಟೆಗಳ ಕಾಲ ವಿಚಾರಣೆ ಮಾಡಿದರೂ ಕೂಡ ಮಚ್ಚಿನ ಬಗ್ಗೆ ಮಾಹಿತಿ ನೀಡಿಲ್ಲ.
ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಬಿಗ್ಬಾಸ್ (Bigg Boss) ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ ಮತ್ತು ರಜತ್ ಕಿಶನ್ (Rajath Kishan) ಅವರಿಗೆ ಈಗ ಸಂಕಷ್ಟ ಹೆಚ್ಚಾಗಿದೆ. ಇಬ್ಬರನ್ನೂ ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ (ಮಾರ್ಚ್ 25) ಮಹಜರು ಮುಗಿದ ಬಳಿಕ 4 ಗಂಟೆ ಕಾಲ ವಿಚಾರಣೆ ಮಾಡಿದರೂ ಸಹ ಮಚ್ಚಿನ ಬಗ್ಗೆ ಮಾಹಿತಿ ನೀಡಿಲ್ಲ. ಈ ಕಾರಣದಿಂದ ಇಬ್ಬರನ್ನೂ ಅರೆಸ್ಟ್ ಮಾಡಲಾಗಿದೆ. ಕೆ.ಸಿ. ಜನರಲ್ ಆಸ್ಪತ್ರೆಗೆ ಕರೆದೊಯ್ದು ಮೆಡಿಕಲ್ ಚೆಕಪ್ ಮಾಡಿಸಲಾಗಿದೆ. ಕೋರಮಂಗಲದ ಎನ್‌ಜಿವಿಯಲ್ಲಿರುವ ಜಡ್ಜ್ ನಿವಾಸದಲ್ಲಿ ವಿನಯ್ (Vinay Gowda) ಮತ್ತು ರಜತ್ ಅವರನ್ನು ಹಾಜರುಪಡಿಸಲಾಗುವುದು. ಇಬ್ಬರನ್ನು ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಲಿದ್ದಾರೆ. ಮಚ್ಚು ರಿಕವರಿ ಮಾಡುವ ಸಲುವಾಗಿ ತಮ್ಮ ಕಸ್ಟಡಿಗೆ ಕೇಳಲು ಪೊಲೀಸರು ನಿರ್ಧರಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.