‘ಮಂಜು ರೋಗಿಷ್ಟ ರಾಜ’: ಬಿಗ್ ಬಾಸ್​ ಮನೆಯಲ್ಲಿ ಮತ್ತೆ ನಾಲಿಗೆ ಹರಿಬಿಟ್ಟ ರಜತ್

Updated on: Nov 28, 2024 | 3:36 PM

ರಜತ್ ಅವರು ಬಿಗ್ ಬಾಸ್​ ಮನೆಗೆ ಕಾಲಿಟ್ಟ ದಿನದಿಂದಲೂ ಮಾತಿನ ಮೂಲಕ ಎಲ್ಲರನ್ನೂ ಕೆಣಕುತ್ತಿದ್ದಾರೆ. ಈಗ ಅವರಿಗೆ ಉಗ್ರಂ ಮಂಜು ಟಾರ್ಗೆಟ್​ ಆಗಿದ್ದಾರೆ. ಮಂಜುಗೆ ರೋಗಿಷ್ಟ ಎಂದು ರಜತ್ ಹೇಳಿದ್ದಾರೆ. ನವೆಂಬರ್​ 28ರ ಸಂಚಿಕೆಯಲ್ಲಿ ಈ ವಿಷಯ ಪ್ರಸಾರ ಆಗಲಿದೆ. ‘ಕಲರ್ಸ್​ ಕನ್ನಡ’ ವಾಹಿನಿ ಪ್ರೋಮೋ ಹಂಚಿಕೊಂಡಿದೆ.

ರಜತ್ ಅವರು ಬಿಗ್ ಬಾಸ್​ ಮನೆಗೆ ಕಾಲಿಟ್ಟ ದಿನದಿಂದಲೂ ಮಾತಿನ ಮೂಲಕ ಎಲ್ಲರನ್ನೂ ಕೆಣಕುತ್ತಿದ್ದಾರೆ. ಈಗ ಅವರಿಗೆ ಉಗ್ರಂ ಮಂಜು ಟಾರ್ಗೆಟ್​ ಆಗಿದ್ದಾರೆ. ಮಂಜುಗೆ ರೋಗಿಷ್ಟ ಎಂದು ರಜತ್ ಹೇಳಿದ್ದಾರೆ. ನವೆಂಬರ್​ 28ರ ಸಂಚಿಕೆಯಲ್ಲಿ ಈ ವಿಷಯ ಪ್ರಸಾರ ಆಗಲಿದೆ. ‘ಕಲರ್ಸ್​ ಕನ್ನಡ’ ವಾಹಿನಿ ಪ್ರೋಮೋ ಹಂಚಿಕೊಂಡಿದೆ. ಅವಹೇಳನಕಾರಿಯಾಗಿ ಮಾತನಾಡಿದ್ದಕ್ಕೆ ರಜತ್​ಗೆ ವಾರಾಂತ್ಯದಲ್ಲಿ ಸುದೀಪ್​ ಕ್ಲಾಸ್ ತೆಗೆದುಕೊಳ್ಳಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More