ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಲವಲವಿಕೆಯಿಂದ ಭಾಗಿಯಾದ ರಜನಿಕಾಂತ್​

Updated on: Jun 09, 2024 | 8:56 PM

ದಕ್ಷಿಣ ಭಾರತದ ‘ಸೂಪರ್​ ಸ್ಟಾರ್​’ ರಜನಿಕಾಂತ್​ ಅವರು ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದಾರೆ. ಪತ್ನಿ ಲತಾ ಜೊತೆ ಆಗಮಿಸಿದ್ದ ರಜನಿ ಬಹಳ ಲವಲವಿಕೆಯಿಂದ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಹಲವು ಗಣ್ಯರು ಕೂಡ ಇದರಲ್ಲಿ ಪಾಲ್ಗೊಂಡಿದ್ದಾರೆ.

ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ (Narendra Modi) ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇಂದು (ಜೂನ್​ 09) ರಾಷ್ಟ್ರಪತಿ ಭವನದಲ್ಲಿ ದೇಶ-ವಿದೇಶದ ಅನೇಕ ಗಣ್ಯರ ಎದುರಿನಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ (Narendra Modi Swearing In Ceremony) ನಡೆದಿದೆ. ವಿವಿಧ ದೇಶಗಳ ಪ್ರಮುಖರು ಇದರಲ್ಲಿ ಭಾಗಿ ಆಗಿದ್ದಾರೆ. ಅಲ್ಲದೇ, ಸಿನಿಮಾ ಕ್ಷೇತ್ರದ ಅನೇಕ ಗಣ್ಯರು ಕೂಡ ಪಾಲ್ಗೊಂಡಿದ್ದಾರೆ. ದಕ್ಷಿಣ ಭಾರತದ ಸೂಪರ್​ ಸ್ಟಾರ್​ ರಜನಿಕಾಂತ್​ ಅವರು ಮೋದಿಯವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಸಾಕ್ಷಿ ಆಗಿದ್ದಾರೆ. ಪತ್ನಿ ಲತಾ ಜೊತೆ ಆಗಮಿಸಿದ್ದ ಅವರು ಬಹಳ ಲವಲವಿಕೆಯಿಂದ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಸಿನಿಮಾಗಳಲ್ಲಿ ಸೂಪರ್​ ಸ್ಟಾರ್​ ಆಗಿ ಮಿಂಚುವ ರಜನಿಕಾಂತ್​ ಅವರ ರಿಯಲ್​ ಲೈಫ್​ನಲ್ಲಿ ತುಂಬ ಸರಳ ವ್ಯಕ್ತಿ. ಇಂದು ಪ್ರಧಾನಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೂ ರಜನಿಕಾಂತ್​ (Rajinikanth) ಅವರು ಸಿಂಪಲ್​ ಆಗಿ ಬಂದಿದ್ದಾರೆ. ಆದರೆ ಅವರ ಎಂಟ್ರಿ ಗ್ರ್ಯಾಂಡ್​ ಆಗಿತ್ತು. ರಾಜ್​ಕುಮಾರ್ ಹಿರಾನಿ, ವಿಕ್ರಾಂತ್ ಮಾಸಿ ಮುಂತಾದ ಸೆಲೆಬ್ರಿಟಿಗಳು ಕೂಡ ಕಾರ್ಯಕ್ರಮಕ್ಕೆ ಸಾಕ್ಷಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More