ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ

Updated on: Jun 22, 2025 | 10:59 AM

Rajinikanth: ಸೂಪರ್ ಸ್ಟಾರ್ ರಜನೀಕಾಂತ್ ಅವರು ಮೈಸೂರಿಗೆ ಬಂದಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಬಿಳಿಕೆರೆ ಗ್ರಾಮದ ಬಳಿ ‘ಜೈಲರ್ 2’ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದು, ಚಿತ್ರೀಕರಣದಲ್ಲಿ ರಜನೀಕಾಂತ್ ಭಾಗವಹಿಸಿದ್ದಾರೆ. ತಮ್ಮನ್ನು ನೋಡಲು ಆಗಮಿಸಿದ್ದ ಅಭಿಮಾನಿಗಳತ್ತ ಕಾರಿನಲ್ಲಿ ನಿಂತು ಕೈಬೀಸಿ, ನಮಸ್ಕಾರ ಮಾಡಿದ್ದಾರೆ ರಜನೀಕಾಂತ್.

ಸೂಪರ್ ಸ್ಟಾರ್ ರಜನೀಕಾಂತ್ (Rajinikanth) ಅವರು ಮೈಸೂರಿಗೆ ಬಂದಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಬಿಳಿಕೆರೆ ಗ್ರಾಮದ ಬಳಿ ‘ಜೈಲರ್ 2’ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದು, ಚಿತ್ರೀಕರಣದಲ್ಲಿ ರಜನೀಕಾಂತ್ ಭಾಗವಹಿಸಿದ್ದಾರೆ. ರಜನೀಕಾಂತ್ ಅವರನ್ನು ನೋಡಲು ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಚಿತ್ರೀಕರಣದ ಬಳಿ ಸೇರಿದ್ದರು. ಈ ವೇಳೆ ನಟ ರಜನೀಕಾಂತ್ ಅವರು ಕಾರಿನಲ್ಲಿ ಕುಳಿತುಕೊಂಡು ಅಭಿಮಾನಿಗಳತ್ತ ಕೈ ಬೀಸಿ, ನಮಸ್ಕಾರ ಮಾಡಿ ಮುಂದೆ ಸಾಗಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More