ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ

Updated on: Apr 24, 2026 | 9:06 AM

ರಾಜ್​ಕುಮಾರ್ ಅವರಿಗೆ ಇಂದು ಜನ್ಮದಿನ. ಅವರನ್ನು ಅಭಿಮಾನಿಗಳು ನೆನಪಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಈ ವಿಶೇಷ ದಿನದಂದು ಅಭಿಮಾನಿಗಳು ಒಳ್ಳೆಯ ಕೆಲಸ ಮಾಡುವುದರಲ್ಲಿ ತೊಡಗಿದ್ದಾರೆ. ಈ ಮಧ್ಯೆ 97ನೇ ಜಯಂತಿ ಆಚರಿಸಲು ಕಂಠೀರವ ಸ್ಟುಡಿಯೋದಲ್ಲಿ ಸಕಲ ಸಿದ್ಧತೆಗಳು ನಡೆದಿದೆ. ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಭಾಗಿ ಆಗುವ ಸಾಧ್ಯತೆ ಇದೆ.

ಇಂದು (ಏಪ್ರಿಲ್ 24) ವರನಟ ಡಾ.ರಾಜ್ ಕುಮಾರ್ ಅವರಿಗೆ 97ನೇ ವರ್ಷದ ಜನ್ಮದಿನ. 97ನೇ ಜಯಂತಿ ಆಚರಿಸಲು ಕಂಠೀರವ ಸ್ಟುಡಿಯೋದಲ್ಲಿ ಸಕಲ ಸಿದ್ಧತೆಗಳು ನಡೆದಿದೆ. ಹೂವಿನ ಅಲಂಕಾರದಿಂದ ಸಮಾಧಿ ಸಿದ್ಧವಾಗಿದೆ. ಇಂದು ರಾಜ್ ಕುಟುಂಬದಿಂದ ಸಮಾಧಿಗೆ ಪೂಜೆ ಸಲ್ಲಿಸಲಾಗುತ್ತದೆ. ನಂತರ ಅವರ 97ನೇ ವರ್ಷದ ಜನ್ಮದಿನ ಆಚರಣೆ ಮಾಡಲಾಗುತ್ತದೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಶೋಭಾ ಕರಂದ್ಲಾಜೆ ಭಾಗಿ ಆಗಲಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More