Dr. Rajkumar Birth Anniversary: ಜಪಾನ್​ನಲ್ಲಿ ಡಾ. ರಾಜ್​ಕುಮಾರ್ ಹುಟ್ಟುಹಬ್ಬ ಆಚರಿಸಿದ ಫ್ಯಾನ್ಸ್

Updated on: Apr 24, 2023 | 10:24 AM

ಜಪಾನ್​ನಲ್ಲೂ ರಾಜ್​ಕುಮಾರ್ ಹುಟ್ಟುಹಬ್ಬ ಆಚರಣೆ ಮಾಡಲಾಗಿದೆ. ಅಲ್ಲಿರುವ ರಾಜ್ ಅಭಿಮಾನಿಗಳು ಅಣ್ಣಾವ್ರ ಫೋಟೋದ ಎದುರು ಕೇಕ್ ಇಟ್ಟು ಕತ್ತರಿಸಿದ್ದಾರೆ.

ಇಂದು (ಏಪ್ರಿಲ್ 24) ವರನಟ ಡಾ. ರಾಜ್​ಕುಮಾರ್ ಜನ್ಮದಿನ. ಅವರ ಬರ್ತ್​ಡೇನ ವಿಶ್ವಾದ್ಯಂತ ಆಚರಿಸಲಾಗುತ್ತಿದೆ. ವಿಶೇಷ ಎಂದರೆ ದೂರದ ಜಪಾನ್​ನಲ್ಲೂ ರಾಜ್​ಕುಮಾರ್ (Rajkumar) ಹುಟ್ಟುಹಬ್ಬ ಆಚರಣೆ ಮಾಡಲಾಗಿದೆ. ಅಲ್ಲಿರುವ ರಾಜ್ ಅಭಿಮಾನಿಗಳು ಅಣ್ಣಾವ್ರ ಫೋಟೋದ ಎದುರು ಕೇಕ್ ಇಟ್ಟು ಕತ್ತರಿಸಿದ್ದಾರೆ. ಈ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಬರ್ತ್​ಡೇ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅವರ ಸಮಾಧಿ ಬಳಿ ಜನರು ನೆರೆದಿದ್ದಾರೆ. ಕುಟುಂಬದವರು ಸಮಾಧಿಗೆ ಪೂಜೆ ಸಲ್ಲಿಸಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More