ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಪ್ರತಿಪಕ್ಷಗಳ ಮನವಿ ಪರಿಗಣಿಸಲು ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ರಾಜ್ಯಸಭಾ ಸದನದಲ್ಲಿ ಪ್ರತಿಪಕ್ಷಗಳ ಸದಸ್ಯರು 'ಅಮಿತ್ ಶಾ, ಸದನ್ ಮೇ ಆವೋ' (ಅಮಿತ್ ಶಾ, ಸದನಕ್ಕೆ ಬನ್ನಿ) ಎಂದು ಘೋಷಣೆಗಳನ್ನು ಕೂಗುತ್ತಿದ್ದಾಗ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರನ್ನು ಉದ್ದೇಶಿಸಿ ಮಾತನಾಡಿದ ಸಭಾಪತಿಗಳು, "ಗೃಹ ಸಚಿವರು ಸದನಕ್ಕೆ ಬರಬೇಕೆಂಬ ಮನವಿಯನ್ನು ಪರಿಗಣಿಸುವಂತೆ ನಾನು ನಿಮಗೆ ವಿನಂತಿಸುತ್ತೇನೆ. ಸಂಸದೀಯ ವ್ಯವಹಾರಗಳ ಸಚಿವರಾಗಿ, ನೀವು ವಿರೋಧ ಪಕ್ಷಗಳ ಭಾವನೆಗಳನ್ನು ಗೃಹ ಸಚಿವರಿಗೆ ತಲುಪಿಸಬೇಕು" ಎಂದು ಹೇಳಿದರು.
ನವದೆಹಲಿ, ಆಗಸ್ಟ್ 6: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ರಾಜ್ಯಸಭೆಗೆ ಆಗಮಿಸಬೇಕೆಂದು ಒತ್ತಾಯಿಸಿ ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ರಾಜ್ಯಸಭಾ ಸಭಾಪತಿ ಹಾಗೂ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಅಮಿತ್ ಶಾ ಅವರ ಉಪಸ್ಥಿತಿಗಾಗಿ ಪ್ರತಿಪಕ್ಷಗಳು ಮಾಡುತ್ತಿರುವ ಮನವಿಯನ್ನು ಪರಿಗಣಿಸುವಂತೆ ಕೇಂದ್ರ ಸರ್ಕಾರಕ್ಕೆ ಇಂದು ಸಲಹೆ ನೀಡಿದ್ದಾರೆ. ರಾಜ್ಯಸಭಾ ಸದನದಲ್ಲಿ ಪ್ರತಿಪಕ್ಷಗಳ ಸದಸ್ಯರು ‘ಅಮಿತ್ ಶಾ, ಸದನ್ ಮೇ ಆವೋ’ (ಅಮಿತ್ ಶಾ, ಸದನಕ್ಕೆ ಬನ್ನಿ) ಎಂದು ಘೋಷಣೆಗಳನ್ನು ಕೂಗುತ್ತಿದ್ದಾಗ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರನ್ನು ಉದ್ದೇಶಿಸಿ ಮಾತನಾಡಿದ ಸಭಾಪತಿಗಳು, “ಗೃಹ ಸಚಿವರು ಸದನಕ್ಕೆ ಬರಬೇಕೆಂಬ ಮನವಿಯನ್ನು ಪರಿಗಣಿಸುವಂತೆ ನಾನು ನಿಮಗೆ ವಿನಂತಿಸುತ್ತೇನೆ. ಸಂಸದೀಯ ವ್ಯವಹಾರಗಳ ಸಚಿವರಾಗಿ, ನೀವು ವಿರೋಧ ಪಕ್ಷಗಳ ಭಾವನೆಗಳನ್ನು ಗೃಹ ಸಚಿವರಿಗೆ ತಲುಪಿಸಬೇಕು” ಎಂದು ಹೇಳಿದರು.
ದೇಶದ ಪ್ರಸ್ತುತ ಪ್ರಮುಖ ವಿಷಯಗಳು ಮತ್ತು ಕಾನೂನು-ಸುವ್ಯವಸ್ಥೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವರು ರಾಜ್ಯಸಭೆಯಲ್ಲಿ ಉಪಸ್ಥಿತರಿದ್ದು ಉತ್ತರ ನೀಡಬೇಕು ಎಂದು ವಿಪಕ್ಷ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಪ್ರತಿಪಕ್ಷಗಳ ನಿಯೋಗದ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ

