ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನೆಲ್ಲ ಆಯ್ತು? ಇದ್ದ ಆರೋಗ್ಯ ಸಮಸ್ಯೆ ಏನು? ವಿವರಿಸಿದ ಜಿಜಿ
‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ರಾಕೇಶ್ ಪೂಜಾರಿ ನಿಧನ ವಾರ್ತೆ ಶಾಕಿಂಗ್ ಎನಿಸಿದೆ. ಅವರು ನಿಧನ ಹೊಂದುತ್ತಾರೆ ಎಂದರೆ ಯಾರೆಂದರೆ ಯಾರೂ ಊಹಿಸಿರಲಿಲ್ಲ. ಅವರ ಸಾವು ಅನೇಕರಿಗೆ ಶಾಕಿಂಗ್ ಎನಿಸಿದೆ. ಅವರು ಸಾಯುವುದಕ್ಕೂ ಮೊದಲು ಏನೆಲ್ಲ ಆಯ್ತು ಎಂಬುದನ್ನು ರಾಕೇಶ್ ಪೂಜಾರಿ ಆಪ್ತ ಜಿಜಿ ವಿವರಿಸಿದ್ದಾರೆ.
‘ಕಾಮಿಡಿ ಕಿಲಾಡಿಗಳು ಸೀಸನ್ 3’ (Comedy Khiladigalu Season 3) ವಿನ್ನರ್ ರಾಕೇಶ್ ಪೂಜಾರಿ ಅವರು ನಿಧನ ಹೊಂದಿದ್ದಾರೆ. ಅವರ ಸಾವಿನ ವಿಚಾರ ಅನೇಕರಿಗೆ ಶಾಕಿಂಗ್ ಎನಿಸಿದೆ. ಅವರಿಗೆ ಹೃದಯಾಘಾತ ಆಗಿತ್ತು. ಸಾವು ಸಂಭವಿಸುವುದಕ್ಕೂ ಮೊದಲು ಏನಾಗಿತ್ತು ಎಂದು ಅವರ ಆಪ್ತ ಹಾಗೂ ನಟ ಗೋವಿಂದೇ ಗೌಡ (ಜಿಜಿ) ವಿವರಿಸಿದ್ದಾರೆ. ರಾಕೇಶ್ ಅವರು ಮೇ 11ರ ಬೆಳಿಗ್ಗೆ ‘ಕಾಂತಾರ: ಚಾಪ್ಟರ್ 1’ ಶೂಟ್ನಲ್ಲಿ ಇದ್ದರು. ಆ ಬಳಿಕ ಸಂಜೆ ಆಪ್ತರೊಬ್ಬರ ಮೆಹಂದಿ ಶಾಸ್ತ್ರಕ್ಕೆ ಹೋಗಿದ್ದಾರೆ. ಮಧ್ಯ ರಾತ್ರಿ ವೇಳೆಗೆ ಹೃದಯಾಘಾತ ಸಂಭವಿಸಿದೆ. ರಾಕೇಶ್ಗೆ ಇತ್ತೀಚೆಗೆ ಅಪಘಾತ ಸಂಭವಿಸಿತ್ತು. ಆದರೆ, ಯಾವುದೇ ಹೆಚ್ಚಿನ ತೊಂದರೆ ಆಗಿರಲಿಲ್ಲ. ಅವರಿಗೆ ಯಾವುದೇ ಆರೋಗ್ಯ ಸಮಸ್ಯೆಯೂ ಇರಲಿಲ್ಲ ಎಂಬುದು ಜಿಜಿ ಮಾತು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: May 12, 2025 08:20 AM
Latest Videos

