ಪೌರ ಕಾರ್ಮಿಕರ ಜೊತೆ ಸೇರಿ ಕಸ ಆಯ್ದ ರಕ್ಷಕ್ ಬುಲೆಟ್

Updated on: Mar 21, 2025 | 9:00 AM

ರಕ್ಷಕ್ ಬುಲೆಟ್ ಅವರು ‘ಭರ್ಜರಿ ಬ್ಯಾಚುಲರ್ಸ್​ ಸೀಸನ್ 2’ ವೇದಿಕೆ ಮೇಲೆ ಮಿಂಚಿದ್ದಾರೆ. ಈ ಸಂದರ್ಭದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈಗ ಅವರು ಪೌರ ಕಾರ್ಮಿಕರ ಜೊತೆ ಸೇರಿ ಕೆಲಸ ಮಾಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಭರ್ಜರಿ ಗಮನ ಸೆಳೆದಿವೆ.

ರಕ್ಷಕ್ ಬುಲೆಟ್ ಅವರು ‘ಭರ್ಜರಿ ಬ್ಯಾಚುಲರ್ಸ್​ ಸೀಸನ್ 2’ ವೇದಿಕೆ ಮೇಲೆ ಗಮನ ಸೆಳೆದಿದ್ದಾರೆ. ಈಗ ಅವರು ಬಿಬಿಎಂಪಿ ಕಾರ್ಮಿಕರ ಜೊತೆ ತೆರಳಿ ಬೀದಿ ಬೀದಿಯಲ್ಲಿ ಕಸ ಆಯ್ದಿದ್ದಾರೆ. ಈ ವಿಡಿಯೋನ ಜೀ ಕನ್ನಡ ವಾಹಿನಿ ಹಂಚಿಕೊಂಡಿದೆ. ಹಣ ಸಂಪಾದನೆಯ ಟಾಸ್ಕ್​ಗಾಗಿ ಅವರು ಈ ರೀತಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ವೀಕೆಂಡ್​ನಲ್ಲಿ ಸಂಪೂರ್ಣ ಎಪಿಸೋಡ್ ಪ್ರಸಾರ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More