ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್

Updated on: Jun 26, 2025 | 10:31 AM

ರಕ್ಷಕ್ ಬುಲೆಟ್ ಅವರು ಬಿಗ್ ಬಾಸ್​ನಲ್ಲಿ ಕೆಲವೇ ವಾರದಲ್ಲಿ ಔಟ್ ಆಗಿರಬಹುದು. ಆದರೆ, ಅವರಿಗೆ ಸಾಕಷ್ಟು ಬೇಡಿಕೆ ಸೃಷ್ಟಿ ಆಗಿದ್ದು, ಭರ್ಜರಿ ಬ್ಯಾಚುಲರ್ಸ್ ವೇದಿಕೆ ಮೇಲೆ. ಈ ವೇದಿಕೆ ಸಾಕಷ್ಟು ಸಹಕಾರಿ ಮಾಡಿದೆ. ರಮೋಲಾ ಜೊತೆ ಅವರು ಲವ್ ಕಹಾನಿ ಜೋರಾಗಿದೆ.

ರಮೋಲಾ ಹಾಗೂ ರಕ್ಷಕ್ ಬುಲೆಟ್ (Rakshak Bullet) ಅವರು ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ನಲ್ಲಿ ಒಟ್ಟಾಗಿ ಆಡುತ್ತಿದ್ದಾರೆ. ರಕ್ಷಕ್​ಗೆ ರಮೋಲಾ ಮೆಂಟರ್. ಈ ವಾರ ಪ್ರಪೋಸಲ್ ರೌಂಡ್ ಇದೆ. ರಮೋಲಾಗೆ ನೆಲದಿಂದ ಕೆಲ ಅಡಿ ಮೇಲೆ ಸೋಫಾ ಹಾಕಿ ಅಲ್ಲಿ ಪ್ರಪೋಸ್ ಮಾಡಿದ್ದಾರೆ ರಕ್ಷಕ್. ಅಲ್ಲದೆ ರಮೋಲಾ ಹಣೆಗೆ ಮುತ್ತಿಟ್ಟಿದ್ದಾರೆ. ಈ ಸಂದರ್ಭದ ಪ್ರೋಮೋ ವೈರಲ್ ಆಗಿ ಗಮನ ಸೆಳೆದಿದೆ. ಉಳಿದ ಸ್ಪರ್ಧಿಗಳು ನಾನಾ ರೀತಿಯಲ್ಲಿ ಪ್ರಪೋಸ್ ಮಾಡಿದ್ದಾರೆ. ಅವುಗಳು ಕೂಡ ಗಮನ ಸೆಳೆದಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More