‘ಕೆಜಿಎಫ್ 2’ ಸಿನಿಮಾವನ್ನು ಕೊಂಡಾಡಿದ ರಕ್ಷಿತ್ ಶೆಟ್ಟಿ; ಇಲ್ಲಿದೆ ವಿಡಿಯೋ

‘ಕೆಜಿಎಫ್ 2’ ಸಿನಿಮಾ ವಿಶ್ವ ಬಾಕ್ಸ್ ಆಫೀಸ್ನಲ್ಲಿ 1,100+ ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಸಿನಿಮಾ ಬಗ್ಗೆ ನಟ/ನಿರ್ಮಾಪಕ ರಕ್ಷಿತ್ ಶೆಟ್ಟಿ ಮಾತನಾಡಿದ್ದಾರೆ.

TV9kannada Web Team

| Edited By: Rajesh Duggumane

May 13, 2022 | 2:05 PM

‘ಕೆಜಿಎಫ್ 2’ ಸಿನಿಮಾ (KGF Chapter 2) ವಿಶ್ವ ಬಾಕ್ಸ್ ಆಫೀಸ್​ನಲ್ಲಿ 1,100+ ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಸಿನಿಮಾ ಬಗ್ಗೆ ನಟ/ನಿರ್ಮಾಪಕ  ರಕ್ಷಿತ್ ಶೆಟ್ಟಿ (Rakshit Shetty) ಮಾತನಾಡಿದ್ದಾರೆ. ಅವರು ಈ ಚಿತ್ರವನ್ನು ಕೊಂಡಾಡಿದ್ದಾರೆ. ‘ಕೆಜಿಎಫ್ 2 ಸಿನಿಮಾ ನನಗೆ ಇಷ್ಟವಾಯ್ತು. ಅವರು ಕಥೆ ಹೇಳುವ ಶೈಲಿಯೇ ಬೇರೆ. ಬಾಕ್ಸ್ ಆಫೀಸ್​ನಲ್ಲಿ ಈ ಸಿನಿಮಾ ದೊಡ್ಡ ದಾಖಲೆ ಬರೆದಿದೆ. 3-4 ತಿಂಗಳ ಹಿಂದೆ ಕನ್ನಡದ ಸಿನಿಮಾ 1000 ಕೋಟಿ ಕಲೆಕ್ಷನ್ ಮಾಡುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ಎಲ್ಲ ಸಿನಿಮಾವನ್ನೂ ನಾವು ಪ್ಯಾನ್ ಇಂಡಿಯಾ ಸಿನಿಮಾ ಮಾಡಬೇಕು ಅಂತ ಇಲ್ಲ’ ಎಂದಿರುವ ರಕ್ಷಿತ್ ಶೆಟ್ಟಿ, ‘777 ಚಾರ್ಲಿ’ ಸಿನಿಮಾವನ್ನು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್ ಮಾಡುತ್ತಿರುವುದೇಕೆ ಎನ್ನುವ ಬಗ್ಗೆ ಹೇಳಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us on

Click on your DTH Provider to Add TV9 Kannada