ದೈವ ಕೋಲದಲ್ಲಿ ಭಾಗವಹಿಸಿ ಆಶೀರ್ವಾದ ಪಡೆದ ರಕ್ಷಿತ್ ಶೆಟ್ಟಿ

Updated on: Jan 19, 2024 | 11:36 AM

ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಕೋಲದಲ್ಲಿ ರಕ್ಷಿತ್ ಅವರು ಭಾಗಿ ಆಗಿದ್ದಾರೆ. ಈ ವೇಳೆ ಅವರು ಸಾಂಪ್ರದಾಯಿಕ ಲುಕ್​ನಲ್ಲಿ ಗಮನ ಸೆಳೆದಿದ್ದಾರೆ. ದೈವಗಳಿಂದ ರಕ್ಷಿತ್ ಶೆಟ್ಟಿ ಆಶೀರ್ವಾದ ಬೇಡಿದ್ದಾರೆ.

ರಕ್ಷಿತ್ ಶೆಟ್ಟಿ ಅವರು ಇತ್ತೀಚೆಗೆ ಉಡುಪಿಗೆ ತೆರಳಿದ್ದಾರೆ. ಮನೆಯ ದೈವ ಕೋಲದಲ್ಲಿ ಭಾಗವಹಿಸಿ ಆಶೀರ್ವಾದ ಪಡೆದಿದ್ದಾರೆ. ದಿನವಿಡೀ ಮನೆಯಲ್ಲಿದ್ದು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಉಡುಪಿಯ ಅಲೆವೂರಿನಲ್ಲಿ ದೈವಗಳ ಪುನರ್ ಪ್ರತಿಷ್ಠೆ, ಕೋಲ ಇತ್ತು. ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಕೋಲದಲ್ಲಿ ಅವರು ಭಾಗಿ ಆಗಿದ್ದಾರೆ. ಈ ವೇಳೆ ಅವರು ಸಾಂಪ್ರದಾಯಿಕ ಲುಕ್​ನಲ್ಲಿ ಗಮನ ಸೆಳೆದಿದ್ದಾರೆ. ದೈವಗಳಿಂದ ರಕ್ಷಿತ್ ಶೆಟ್ಟಿ (Rakshit Shetty) ಆಶೀರ್ವಾದ ಬೇಡಿದ್ದಾರೆ. ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಪಾರ್ಟ್ ಎ ಹಾಗೂ ಬಿ ಕಳೆದ ವರ್ಷ ರಿಲೀಸ್ ಆಗಿ ಗೆಲುವು ಕಂಡಿದೆ. ಹೊಸ ಸಿನಿಮಾ ಕೆಲಸಗಳಲ್ಲಿ ಅವರು ತೊಡಗಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Jan 19, 2024 11:36 AM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More