ವಿಡಿಯೋ: ಊರಿನ ಗಣೇಶೋತ್ಸವದಲ್ಲಿ ಭಾಗಿಯಾದ ರಕ್ಷಿತ್ ಶೆಟ್ಟಿ

|

Updated on: Sep 11, 2024 | 5:30 PM

Rakshit Shetty: ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟ ರಕ್ಷಿತ್ ಶೆಟ್ಟಿ, ಚಿತ್ರೀಕರಣ, ಪ್ರೀ ಪ್ರೊಡಕ್ಷನ್​ಗಳಿಂದ ಬಿಡುವು ಪಡೆದು ತಮ್ಮ ಹುಟ್ಟೂರಿನ ಗಣೇಶೋತ್ಸವದಲ್ಲಿ ಪಾಲ್ಗೊಂಡರು. ಸ್ಥಳೀಯರೊಟ್ಟಿಗೆ ಬೆರೆತರು. ಇಲ್ಲಿದೆ ವಿಡಿಯೋ...

ನಟ ರಕ್ಷಿತ್ ಶೆಟ್ಟಿ ಪ್ರತಿ ವರ್ಷ ತಮ್ಮ ಊರಿನ ಗಣೇಶೋತ್ಸವದಲ್ಲಿ ಭಾಗಿಯಾಗುವ ಸಂಪ್ರದಾಯ ಪಾಲಿಸಿಕೊಂಡು ಬರುತ್ತಿದ್ದಾರೆ. ಅಂತೆಯೇ ಈ ಬಾರಿಯೂ ಸಹ ಸಿಂಪಲ್ ಆಗಿ ಉಡುಪಿಯ ಅಲೆವೂರು ಸಾರ್ವಜನಿಕ ಗಣೇಶೋತ್ಸವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಉಡುಪಿ ತಾಲೂಕಿನ ಕುಕ್ಕಿಕಟ್ಟೆ ನಿವಾಸಿಯಾಗಿರುವ ಸಿಂಪಲ್ ಸ್ಟಾರ್ ತನ್ನ ಹುಟ್ಟೂರು ಅಲೆವೂರಿನ ಗಣೇಶೋತ್ಸವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾದರು. ಅಲೆವೂರು ಕಟ್ಟೆ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ರಕ್ಷಿತ್ ದೇವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಕುಟುಂಬದವರನ್ನು, ಹಳೆ ಗೆಳೆಯರನ್ನು ಭೇಟಿಯಾಗಿ ಮಾತನಾಡಿದರು. ಈ ವೇಳೆ ಸ್ಥಳೀಯರು ರಕ್ಷಿತ್ ಶೆಟ್ಟಿ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ