ಕನ್ನಡದಲ್ಲೂ ‘ಹೇಮಾ ಸಮಿತಿ’ ರೀತಿ ವರದಿ ಬೇಕು ಎಂಬ ಮಾತಿಗೆ ರಕ್ಷಿತ್​ ಶೆಟ್ಟಿ ಹೇಳಿದ್ದೇನು?

Updated on: Sep 06, 2024 | 5:16 PM

ಚಿತ್ರರಂಗದಲ್ಲಿ ಕೆಲಸ ಮಾಡುವ ಮಹಿಳೆಯರ ಒಳಿತಿಗಾಗಿ ಹಲವರು ಧ್ವನಿ ಎತ್ತಿದ್ದಾರೆ. ಈಗಾಗಲೇ ಫೈರ್​ ಸಂಸ್ಥೆಯ ಮೂಲಕ ನೂರಾರು ಜನರು ಸಹಿ ಮಾಡಿ ಸರ್ಕಾರಕ್ಕೆ ಒಂದು ಮನವಿ ಸಲ್ಲಿಸಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಮಹಿಳೆಯರು ಎದುರಿಸಿದ ಶೋಷಣೆಗಳ ಬಗ್ಗೆ ತನಿಖೆ ನಡೆಸಲು ಒಂದು ಸಮಿತಿ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಇದಕ್ಕೆ ರಕ್ಷಿತ್​ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.

‘ಹೇಮಾ ಸಮಿತಿ’ ರೀತಿ ನಮ್ಮಲ್ಲೂ ಒಂದು ಕಮಿಟಿ ರಚನೆ ಆಗಬೇಕು ಎಂಬುದು ಒಳ್ಳೆಯ ಉದ್ದೇಶ. ನಾವು ಕೂಡ ಅದಕ್ಕೆ ಸಹಿ ಹಾಕುತ್ತೇವೆ. ಸಹಿ ಹಾಕಿದ ಮೇಲೆ ನಾನು ಮತ್ತೆ ಗುಹೆಯಲ್ಲಿ ಹೋಗಿ ಕುಳಿತುಕೊಂಡು ಸಿನಿಮಾ ಮಾಡಿದರೆ ಅದಕ್ಕೆ ಅರ್ಥ ಇರುವುದಿಲ್ಲ. ಒಮ್ಮೆ ಸಹಿ ಮಾಡಿದ ಮೇಲೆ ಅದರ ಹಿಂದಿರುವ ಕೆಲಸವನ್ನು ಕೂಡ ನಾನು ಮಾಡಬೇಕು’ ಎಂದು ರಕ್ಷಿತ್​ ಶೆಟ್ಟಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More