AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಕಥೆಗಳನ್ನು ಮೊದಲು ಸಿನಿಮಾ ಮಾಡಬೇಕಿದೆ’; ರಕ್ಷಿತ್ ಶೆಟ್ಟಿ ಮಾತು

‘ನನ್ನ ಕಥೆಗಳನ್ನು ಮೊದಲು ಸಿನಿಮಾ ಮಾಡಬೇಕಿದೆ’; ರಕ್ಷಿತ್ ಶೆಟ್ಟಿ ಮಾತು

ರಾಜೇಶ್ ದುಗ್ಗುಮನೆ
|

Updated on: Aug 28, 2023 | 8:37 AM

Share

ಇತ್ತೀಚೆಗೆ ಮಾತನಾಡಿದ್ದ ರಕ್ಷಿತ್ ಶೆಟ್ಟಿ ಅವರು ಇನ್ನುಮುಂದೆ ಕಡಿಮೆ ಸಿನಿಮಾಗಳಲ್ಲಿ ನಟಿಸುತ್ತೇನೆ ಎಂದಿದ್ದರು. ಅಂದರೆ, ನಿರ್ದೇಶನದ ಮೇಲೆ ಹೆಚ್ಚೆಚ್ಚು ಅವರು ಹೆಚ್ಚು ಗಮನ ಹರಿಸಲಿದ್ದಾರೆ ಎಂಬುದು ಇದರ ಅರ್ಥವಾಗಿತ್ತು. ಈ ವಿಚಾರದ ಬಗ್ಗೆ ರಕ್ಷಿತ್ ಅವರು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ

ಇತ್ತೀಚೆಗೆ ಮಾತನಾಡಿದ್ದ ರಕ್ಷಿತ್ ಶೆಟ್ಟಿ (Rakshit Shetty) ಅವರು ಇನ್ನುಮುಂದೆ ಕಡಿಮೆ ಸಿನಿಮಾಗಳಲ್ಲಿ ನಟಿಸುತ್ತೇನೆ ಎಂದಿದ್ದರು. ಅಂದರೆ, ನಿರ್ದೇಶನದ ಮೇಲೆ ಹೆಚ್ಚೆಚ್ಚು ಅವರು ಹೆಚ್ಚು ಗಮನ ಹರಿಸಲಿದ್ದಾರೆ ಎಂಬುದು ಇದರ ಅರ್ಥವಾಗಿತ್ತು. ಈ ವಿಚಾರದ ಬಗ್ಗೆ ರಕ್ಷಿತ್ ಅವರು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಅವರು ಬ್ಯುಸಿ ಆಗಿದ್ದಾರೆ. ಇದರ ಭಾಗವಾಗಿ ಅವರು ಟಿವಿ9 ಕನ್ನಡಕ್ಕೆ ವಿಶೇಷ ಸಂದರ್ಶನ ನೀಡಿದ್ದಾರೆ. ಆಗ ಅವರು ನಿರ್ದೇಶನದ ಬಗ್ಗೆ ಮಾತನಾಡಿದ್ದಾರೆ. ‘ನನ್ನ ಕಥೆಗಳೇ ಸಾಕಷ್ಟಿವೆ. ಅವುಗಳನ್ನು ಸಿನಿಮಾ ಮಾಡಬೇಕಿದೆ. ಅದಕ್ಕೆ ನಾನು ಮೊದಲ ಆದ್ಯತೆ ನೀಡುತ್ತಿದ್ದೇನೆ’ ಎಂದಿದ್ದಾರೆ ರಕ್ಷಿತ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More