ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
Rakshit Shetty: ರಕ್ಷಿತ್ ಶೆಟ್ಟಿ ಸಿನಿಮಾ ಕೆಲಸಗಳ ಬಗ್ಗೆ ಗಮನ ಹರಿಸುತ್ತಿದ್ದಾರೆ. ‘ರಿಚರ್ಡ್ ಆ್ಯಂಟನಿ’ ಸಿನಿಮಾದಲ್ಲಿ ನಟಿಸುವುದರ ಜೊತೆಗೆ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಜನರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಮಧ್ಯೆ ಉಡುಪಿಯ ಬೈಲೂರಿನ ನೀಲಕಂಠ ಬಬ್ಬು ಸ್ವಾಮಿ ಕೊರಗಜ್ಜ ದೈವಸ್ಥಾನಕ್ಕೆ ರಕ್ಷಿತ್ ಭೇಟಿ ನೀಡಿದ್ದಾರೆ.
ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ ಅವರು ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಗೆಲುವಿನ ಖುಷಿಯಲ್ಲಿದ್ದಾರೆ. ಕಳೆದ ವರ್ಷ ಈ ಚಿತ್ರದ ಪಾರ್ಟ್ ಎ ಹಾಗೂ ಪಾರ್ಟ್ ಬಿ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈಗ ಅವರು ‘ರಿಚರ್ಡ್ ಆ್ಯಂಟನಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ ಅವರು ಕೊರಗಜ್ಜ ಸನ್ನಿಧಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಉಡುಪಿಯ ಬೈಲೂರಿನ ನೀಲಕಂಠ ಬಬ್ಬು ಸ್ವಾಮಿ ಕೊರಗಜ್ಜ ದೈವಸ್ಥಾನಕ್ಕೆ ರಕ್ಷಿತ್ ಭೇಟಿ ನೀಡಿದ್ದಾರೆ. ಉಡುಪಿಗೆ ಬಂದಾಗಲೆಲ್ಲ ರಕ್ಷಿತ್ ಕೊರಗಜ್ಜನ ಸನ್ನಿಧಾನಕ್ಕೆ ಭೇಟಿ ನೀಡುತ್ತಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Jul 01, 2024 08:30 AM