Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ: ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ನಟ ರಕ್ಷಿತ್ ಶೆಟ್ಟಿ

ವಿಡಿಯೋ: ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ನಟ ರಕ್ಷಿತ್ ಶೆಟ್ಟಿ

ಮಂಜುನಾಥ ಸಿ.
|

Updated on: Feb 23, 2024 | 11:24 PM

Rakshit Shetty: ದೈವಭಕ್ತರಾದ ನಟ ರಕ್ಷಿತ್ ಶೆಟ್ಟಿ ಉಡುಪಿಯ ಕಾಪು ತಾಲ್ಲೂಕಿನ ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿ, ನಡೆಯುತ್ತಿರುವ ಕಾಮಗಾರಿ ವೀಕ್ಷಿಸಿದರು.

ನಟ ರಕ್ಷಿತ್ ಶೆಟ್ಟಿ (Rakshit Shetty) ದೇವರಲ್ಲಿ ನಂಬಿಕೆ, ಭಕ್ತಿಯುಳ್ಳವರು. ಆಗಾಗ್ಗೆ ದೇವಾಲಯಗಳಿಗೆ ಭೇಟಿ ನೀಡುತ್ತಿರುತ್ತಾರೆ. ಇತ್ತೀಚೆಗಷ್ಟೆ ದೈವ ಆರಾಧನೆ ಕಾರ್ಯಕ್ರಮವೊಂದಕ್ಕೆ ರಕ್ಷಿತ್ ಶೆಟ್ಟಿ ಭೇಟಿ ನೀಡಿ ಆಶೀರ್ವಾದ ಪಡೆದಿದ್ದರು. ಇದೀಗ ನಟ ರಕ್ಷಿತ್ ಶೆಟ್ಟಿ ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಇಂದು (ಫೆಬ್ರವರಿ 23) ಕಾಪು ಮಾರಿಗುಡಿಗೆ ಭೇಟಿ ನೀಡಿ ಮಾರಿಯಮ್ಮನ ದರ್ಶನವನ್ನು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಪಡೆದುಕೊಂಡರು. ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿ ಹೊಸ ಮಾರಿಗುಡಿ ದೇವಾಲಯ ನಿರ್ಮಾಣವಾಗುತ್ತಿದೆ. ಬಹು ಕೋಟಿ ವೆಚ್ಚದಲ್ಲಿ ದೇವಾಲಯ ನಿರ್ಮಾಣವಾಗುತ್ತಿದ್ದು, ದೇವಾಲಯದಲ್ಲಿ ಬರದಿಂದ ಸಾಗುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿ ದರಕ್ಷಿತ್ ಶೆಟ್ಟಿ, ಇಳಕಲ್ ಕಲಾತ್ಮಕ ಶೈಲಿಯ ಕೆತ್ತನೆಗಳ ಬಗ್ಗೆ ಮಾಹಿತಿ ಪಡೆದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ