ಕಾಪು ಹೊಸ ಮಾರಿಯಮ್ಮ ಸನ್ನಿಧಾನಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ

Updated on: Mar 10, 2025 | 6:14 PM

ನಟ ರಕ್ಷಿತ್ ಶೆಟ್ಟಿ ಅವರು ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಅವರ ಜೊತೆ ತಾಯಿ ಕೂಡ ಸಾಥ್ ನೀಡಿದರು. ಮಾರಿಯಮ್ಮ ಸನ್ನಿಧಾನದಲ್ಲಿ ರಕ್ಷಿತ್ ಶೆಟ್ಟಿ ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾಪು ಹೊಸ ಮಾರಿಗುಡಿ ದೇವಾಲಯ ಇತ್ತೀಚಿಗೆ ಅದ್ದೂರಿಯಾಗಿ ಜೀರ್ಣೋದ್ಧಾರಗೊಂಡಿದೆ.

‘ಸಿಂಪಲ್ ಸ್ಟಾರ್​’ ರಕ್ಷಿತ್ ಶೆಟ್ಟಿ ಅವರು ಕಾಪು ಹೊಸ ಮಾರಿಗುಡಿ (Kaup Hosa Marigudi Temple) ದೇವಸ್ಥಾನಕ್ಕೆ ಇಂದು (ಮಾರ್ಚ್​ 10) ಭೇಟಿ ನೀಡಿದ್ದಾರೆ. ಅವರ ಜೊತೆ ತಾಯಿ ಸಹ ಸಾಥ್ ನೀಡಿದ್ದಾರೆ. ರಕ್ಷಿತ್ ಶೆಟ್ಟಿ (Rakshit Shetty) ಅವರು ಮಾರಿಯಮ್ಮ ಸನ್ನಿಧಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇತ್ತೀಚಿಗೆ ಕಾಪು ಹೊಸ ಮಾರಿಗುಡಿ ದೇವಾಲಯ ಅದ್ದೂರಿಯಾಗಿ ಜೀರ್ಣೋದ್ಧಾರಗೊಂಡಿದೆ. ಅನೇಕ ಸೆಲೆಬ್ರಿಟಿಗಳು ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ. ತಾಯಿ ಜೊತೆ ಆಗಮಿಸಿದ ರಕ್ಷಿತ್ ಶೆಟ್ಟಿಗೆ ದೇವಾಲಯದ ಆಡಳಿತ ಮಂಡಳಿಯಿಂದ ವಿಶೇಷ ಗೌರವ ಸಲ್ಲಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More