AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್

‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್

ಮದನ್​ ಕುಮಾರ್​
|

Updated on: Apr 30, 2026 | 10:34 PM

Share

‘ಕೆಡಿ’ ಸಿನಿಮಾ ಬಿಡುಗಡೆ ಆಗಿದೆ. ರಕ್ಷಿತಾ ಪ್ರೇಮ್ ಅವರು ಅಭಿಮಾನಿಗಳ ಜೊತೆ ಕುಳಿತು ಈ ಸಿನಿಮಾವನ್ನು ನೋಡಿದ್ದಾರೆ. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಿನಿಮಾದಲ್ಲಿ ನಾಯಕಿ ರೀಷ್ಮಾ ನಾಣಯ್ಯ ಅವರ ಪಾತ್ರವನ್ನು ನೋಡಿದಾಗ ತಮಗೆ ದರ್ಶನ ನೆನಪು ಬಂತು ಎಂದು ರಕ್ಷಿತಾ ಪ್ರೇಮ್ ಹೇಳಿದ್ದಾರೆ.

‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣದ ‘ಕೆಡಿ: ದಿ ಡೆವಿಲ್’ (KD The Devil) ಸಿನಿಮಾ ಬಿಡುಗಡೆ ಆಗಿದೆ. ಪ್ರೇಮ್ ನಿರ್ದೇಶನದ ಈ ಸಿನಿಮಾವನ್ನು ಅಭಿಮಾನಿಗಳ ಜೊತೆ ಕುಳಿತು ನೋಡಿದ್ದಾರೆ ರಕ್ಷಿತಾ. ಈ ಚಿತ್ರದಲ್ಲಿ ನಾಯಕಿ ರೀಷ್ಮಾ ನಾಣಯ್ಯ ಅವರ ಪಾತ್ರವನ್ನು ನೋಡಿದಾಗ ‘ಸುಂಟರಗಾಳಿ’, ‘ಕಲಾಸಿಪಾಳ್ಯ’ ಸಿನಿಮಾಗಳಲ್ಲಿ ರಕ್ಷಿತಾ ಮಾಡಿದ ಪಾತ್ರಗಳು ನೆನಪಾಯ್ತು ಎಂದು ಪ್ರೇಕ್ಷಕರು ಹೇಳಿದ್ದಾರೆ. ಆ ಮಾತಿಗೆ ಪ್ರತಿಕ್ರಿಯಿಸಿದ ರಕ್ಷಿತಾ ಪ್ರೇಮ್ ಅವರು, ‘ನನಗೂ ಕೂಡ ದರ್ಶನ್ (Darshan) ನೆನಪಾಯ್ತು’ ಎಂದು ಹೇಳಿದ್ದಾರೆ. ಮೊದಲ ದಿನ ಸಿನಿಮಾಗೆ ಸಿಗುತ್ತಿರುವ ಪ್ರತಿಕ್ರಿಯೆ ನೋಡಿ ರಕ್ಷಿತಾ ಖುಷಿಯಾಗಿದ್ದಾರೆ. ಧ್ರುವ ಸರ್ಜಾ ಮತ್ತು ಪ್ರೇಮ್ ಅವರ 5 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫಲ ಸಿಕ್ಕಿದೆ ಎಂದು ರಕ್ಷಿತಾ (Rakshita Prem) ಹೇಳಿದ್ದಾರೆ. ಈ ಸಿನಿಮಾದಲ್ಲಿ ಕಿಚ್ಚ ಸುದೀಪ್ ಮಾಡಿರುವ ಅತಿಥಿ ಪಾತ್ರದ ಬಗ್ಗೆಯೂ ಅವರು ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More