ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?

|

Updated on: Jun 29, 2024 | 10:15 PM

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ಕಳೆಯುತ್ತಿರುವ ದರ್ಶನ್​ರನ್ನು ಇಂದು ನಟಿ ರಕ್ಷಿತಾ ಹಾಗೂ ನಿರ್ದೇಶಕ ಪ್ರೇಮ್ ಭೇಟಿಯಾದರು. ಬಳಿಕ, ಮಾಧ್ಯಮಗಳೊಟ್ಟಿಗೆ ಮಾತನಾಡಿ ರೇಣುಕಾ ಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ ಎಂದರು.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ತೂಗುದೀಪ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ದೂಡುತಿದ್ದಾರೆ. ಹಲವು ಅಭಿಮಾನಿಗಳು ದರ್ಶನ್​ರನ್ನು ಭೇಟಿಯಾಗಲು ಪ್ರತಿನಿತ್ಯ ಜೈಲಿನ ಬಳಿ ಬರುತ್ತಿದ್ದಾರೆ. ಆದರೆ ಪೊಲೀಸರು ಯಾರಿಗೂ ಅವಕಾಶ ನೀಡುತ್ತಿಲ್ಲ. ಕೇವಲ ಕುಟುಂಬ ಸದಸ್ಯರಿಗೆ ಹಾಗೂ ವಕೀಲರಿಗಷ್ಟೆ ಅವಕಾಶ ನೀಡಲಾಗಿದೆ. ಇಂದು ದರ್ಶನ್​ರ ಗೆಳೆಯರಾದ ನಟಿ ರಕ್ಷಿತಾ ಹಾಗೂ ನಿರ್ದೇಶಕ ಪ್ರೇಮ್ ಅವರುಗಳು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ದರ್ಶನ್ ಜೊತೆ ಮಾತನಾಡಿದರು. ದರ್ಶನ್ ಭೇಟಿ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ರಕ್ಷಿತಾ ಹಾಗೂ ಪ್ರೇಮ್, ದರ್ಶನ್ ಆರೋಗ್ಯವಾಗಿದ್ದಾರೆ. ಪ್ರಕರಣ ನ್ಯಾಯಾಲಯದಲ್ಲಿರುವ ಕಾರಣ ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಕಾನೂನಿಗಿಂತ ಯಾರೂ ದೊಡ್ಡವರಲ್ಲ, ರೇಣುಕಾ ಸ್ವಾಮಿ ಆತ್ಮಕ್ಕೆ ಶಾಂತಿ ದೊರಕಲಿ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ