AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಬಿಗ್ ಬಾಸ್ ಬಾಗಿಲು?

ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಬಿಗ್ ಬಾಸ್ ಬಾಗಿಲು?

ರಾಜೇಶ್ ದುಗ್ಗುಮನೆ
|

Updated on:Jan 05, 2026 | 8:33 AM

Share

ಬಿಗ್ ಬಾಸ್ ಮನೆಯಲ್ಲಿರುವ ರಕ್ಷಿತಾ ಶೆಟ್ಟಿ ಅವರು ಈಗ ಸುದ್ದಿಯಲ್ಲಿ ಇದ್ದಾರೆ. ಅವರು ಮ್ಯಾನ್ ಹ್ಯಾಂಡಲಿಂಗ್ ಮಾಡಿದರೇ ಎನ್ನುವ ಪ್ರಶ್ನೆ ಮೂಡಿದೆ. ಏಕೆಂದರೆ ಅವರು ರಾಶಿಕಾರನ್ನು ತಳ್ಳಿದ್ದಾರೆ. ಈ ಸಂದರ್ಭದ ಪ್ರೋಮೋ ಬಿಡುಗಡೆ ಆಗಿ ವೈರಲ್ ಆಗಿ ಗಮನ ಸೆಳೆದಿವೆ. ಆ ಬಗ್ಗೆ ಇಲ್ಲಿದೆ ವಿವರ.

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ರಕ್ಷಿತಾ ಶೆಟ್ಟಿ ಸುದ್ದಿಯಲ್ಲಿ ಇದ್ದಾರೆ. ಕೊನೆಯ ವಾರಗಳಲ್ಲಿ ಅವರು ಜಗಳಕ್ಕೆ ಇಳಿದಿದ್ದಾರೆ. ರಕ್ಷಿತಾ ಶೆಟ್ಟಿ ಅವರು ರಾಶಿಕಾನ ತಳ್ಳಿರೋದು ಪ್ರೋಮೋದಲ್ಲಿ ಕಾಣಿಸಿದೆ. ಇದು ಚರ್ಚೆ ಹುಟ್ಟುಹಾಕಿದೆ. ಈ ಕಾರಣಕ್ಕೆ ರಕ್ಷಿತಾನ ಎಲಿಮಿನೇಟ್ ಮಾಡುತ್ತಾರಾ ಎಂಬ ಪ್ರಶ್ನೆ ಮೂಡಿದೆ. ತಳ್ಳಾಡಿಕೊಂಡರೆ ಕೆಲವೊಮ್ಮೆ ಬಿಗ್ ಬಾಸ್ ಅದನ್ನು ಗಂಭೀರವಾಗಿ ಪರಿಗಣಿಸುತ್ತಾರೆ. ಈ ಪ್ರಕರಣದಲ್ಲಿ ಬಿಗ್ ಬಾಸ್ ಅದನ್ನು ಯಾವ ರೀತಿ ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jan 05, 2026 08:29 AM