ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ

Updated on: Dec 15, 2025 | 8:19 AM

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ರಕ್ಷಿತಾ ಶೆಟ್ಟಿ ಅವರು ಎಲಿಮಿನೇಟ್ ಆಗಿಲ್ಲ. ಅವರನ್ನು ಸೀಕ್ರೆಟ್ ರೂಂನಲ್ಲಿ ಕೂರಿಸಲಾಗಿದೆ. ಅವರಿಗೆ ಈಗ ಹೊಸ ಚಿಂತೆ ಶುರವಾಗಿದೆ. ಏನು ಆ ಚಿಂತೆ? ಆ ಬಗ್ಗೆ ಇಲ್ಲಿದೆ ವಿವರ. ಅವರು ಚಿಂತೆಯನ್ನು ಯಾರು ದೂರ ಮಾಡುತ್ತಾರೆ ನೋಡಬೇಕಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ರಕ್ಷಿತಾ ಶೆಟ್ಟಿ ಹಾಗೂ ಧ್ರುವಂತ್ ಅವರನ್ನು ಫೇಕ್ ಎಲಿಮಿನೇಷನ್ ಮೂಲಕ ಹೊರಕ್ಕೆ ತಂದು ಸೀಕ್ರೆಟ್ ರೂಂನಲ್ಲಿ ಇರಿಸಲಾಗಿದೆ. ಧ್ರುವಂತ್ ಹಾಗೂ ರಕ್ಷಿತಾ ಮಧ್ಯೆ ಮೊದಲಿನಿಂದ ಯಾವುದೂ ಸರಿ ಇಲ್ಲ. ಈಗ ಇಬ್ಬರೂ ಒಟ್ಟಿಗೆ ಇರಬೇಕಾದ ಪರಿಸ್ಥಿತಿ ಬಂದಿರುವುದು ರಕ್ಷಿತಾ ಚಿಂತೆಗೆ ಕಾರಣ ಆಗಿದೆ. ಅವರಿಗೆ ಎಲಿಮಿನೇಷನ್ ಆಗಿಲ್ಲ ಎಂಬ ಖುಷಿ ಒಂದು ಕಡೆಯಾದರೆ, ಧ್ರುವಂತ್ ಜೊತೆ ಇರಬೇಕಲ್ಲ ಎಂಬ ಬೇಸರ ಮತ್ತೊಂದು ಕಡೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Dec 15, 2025 08:18 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More