ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್

Updated on: May 25, 2026 | 8:15 PM

ರಾಮ್ ಚರಣ್ ಬೆಂಗಳೂರಿಗೆ ಬಂದು ‘ಪೆದ್ದಿ’ ಚಿತ್ರದ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇದಿಕೆಯಲ್ಲಿ ಅವರಿಗೆ ಶಿವರಾಜ್​ಕುಮಾರ್ ಕೂಡ ಸಾಥ್ ನೀಡಿದರು. ‘ಪೆದ್ದಿ’ ಚಿತ್ರದಲ್ಲಿ ಶಿವಣ್ಣ ಹಾಗೂ ರಾಮ್ ಚರಣ್ ತೆರೆ ಹಂಚಿಕೊಂಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಕನ್ನಡ, ತೆಲುಗು, ಇಂಗ್ಲಿಷ್ ಮಿಶ್ರಿತವಾಗಿ ರಾಮ್ ಚರಣ್ ಮಾತಾಡಿದರು.

ನಟ ರಾಮ್ ಚರಣ್ ಅವರು ಬೆಂಗಳೂರಿಗೆ ಬಂದು ‘ಪೆದ್ದಿ’ (Peddi) ಸಿನಿಮಾದ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇದಿಕೆಯಲ್ಲಿ ಅವರಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ (Shiva Rajkumar) ಸಾಥ್ ನೀಡಿದರು. ‘ಪೆದ್ದಿ’ ಚಿತ್ರದಲ್ಲಿ ಶಿವಣ್ಣ ಮತ್ತು ರಾಮ್ ಚರಣ್ ಅವರು ತೆರೆ ಹಂಚಿಕೊಂಡಿದ್ದಾರೆ. ಚಿತ್ರತಂಡದ ಜೊತೆಗೆ ನೆರೆದಿದ್ದ ಅನೇಕ ಅಭಿಮಾನಿಗಳನ್ನು ಉದ್ದೇಶಿಸಿ ರಾಮ್ ಚರಣ್ ಅವರು ಮಾತನಾಡಿದರು. ಕನ್ನಡ, ತೆಲುಗು, ಇಂಗ್ಲಿಷ್ ಮಿಶ್ರಿತವಾಗಿ ಅವರು ಮಾತಾಡಿದರು. ‘ಈಗ ನನಗೆ ಸ್ವಲ್ಪ ಕನ್ನಡ ಬರುತ್ತದೆ. ಮುಂದಿನ ಭೇಟಿ ವೇಳೆಗೆ ಕನ್ನಡ ಕಲಿತುಕೊಳ್ಳುತ್ತೇನೆ. ಮುಂದಿನ ಬಾರಿ ಜಾಸ್ತಿ ಕನ್ನಡ ಮಾತಾಡುತ್ತೇನೆ’ ಎಂದು ರಾಮ್ ಚರಣ್ (Ram Charan) ಅವರು ಹೇಳಿದರು. ಈ ಸಿನಿಮಾವನ್ನು ಬಹಳ ಕಷ್ಟಪಟ್ಟು ಮಾಡಿರುವುದಾಗಿ ಅವರು ತಿಳಿಸಿದ್ದಾರೆ. ಜೂನ್ 4ರಂದು ‘ಪೆದ್ದಿ’ ಸಿನಿಮಾ ರಿಲೀಸ್ ಆಗಲಿದೆ. ಜಾನ್ವಿ ಕಪೂರ್ ಅವರು ನಾಯಕಿಯಾಗಿ ಅಭಿನಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: May 25, 2026 08:14 PM
Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More