‘ಪೆದ್ದಿ’ ಚಿತ್ರದಲ್ಲಿ ಶಿವರಾಜ್ಕುಮಾರ್ ಗತ್ತು ನೋಡಿ; ಇಲ್ಲಿದೆ ಮೇಕಿಂಗ್ ವಿಡಿಯೋ
‘ಹ್ಯಾಟ್ರಿಕ್ ಹೀರೋ’ ಶಿವರಾಜ್ಕುಮಾರ್ ಅವರಿಗೆ ಕನ್ನಡ ಮಾತ್ರವಲ್ಲದೇ ಪರಭಾಷೆಯ ಚಿತ್ರರಂಗಗಳಲ್ಲೂ ಬೇಡಿಕೆ ಇದೆ. ರಾಮ್ ಚರಣ್ ಅಭಿನಯದ ‘ಪೆದ್ದಿ’ ಸಿನಿಮಾದಲ್ಲಿ ಶಿವಣ್ಣ ಒಂದು ಪವರ್ಫುಲ್ ಪಾತ್ರ ಮಾಡಿದ್ದಾರೆ. ಈ ಬಹುನಿರೀಕ್ಷಿತ ಸಿನಿಮಾ ಜೂನ್ 4ರಂದು ಬಿಡುಗಡೆ ಆಗಲಿದೆ. ಶೀಘ್ರದಲ್ಲೇ ಟ್ರೇಲರ್ ರಿಲೀಸ್ ಆಗಲಿದೆ.
ನಟ ಶಿವರಾಜ್ಕುಮಾರ್ ಅವರಿಗೆ ಕನ್ನಡ ಮಾತ್ರವಲ್ಲದೇ ಪರಭಾಷೆಯ ಚಿತ್ರರಂಗದಲ್ಲೂ ಬೇಡಿಕೆ ಇದೆ. ರಾಮ್ ಚರಣ್ ಅಭಿನಯದ ‘ಪೆದ್ದಿ’ (Peddi) ಸಿನಿಮಾದಲ್ಲಿ ಶಿವಣ್ಣ ಒಂದು ಪವರ್ಫುಲ್ ಪಾತ್ರ ಮಾಡಿದ್ದಾರೆ. ಈ ಬಹುನಿರೀಕ್ಷಿತ ಸಿನಿಮಾ ಜೂನ್ 4ರಂದು ಬಿಡುಗಡೆ ಆಗಲಿದೆ. ಈಗ ಈ ಸಿನಿಮಾದ ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ. ಮೇ 18ರಂದು ‘ಪೆದ್ದಿ’ ಚಿತ್ರದ ಟ್ರೇಲರ್ ರಿಲೀಸ್ ಆಗಲಿದೆ. ಶಿವರಾಜ್ಕುಮಾರ್ (Shivarajkumar) ಅವರ ಪಾತ್ರ ಹೇಗಿರಲಿದೆ ಎಂಬುದರ ಝಲಕ್ ತೋರಿಸಲು ಈ ಸಣ್ಣ ವಿಡಿಯೋ ತುಣುಕನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಮೇಕಿಂಗ್ ವಿಡಿಯೋದಲ್ಲಿ ಶಿವರಾಜ್ಕುಮಾರ್, ರಾಮ್ ಚರಣ್ (Ram Charan) ಅವರು ಜೊತೆಯಾಗಿ ಕೆಲಸ ಮಾಡುತ್ತಿರುವುದು ಕಾಣಿಸಿದೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

