‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಇಲ್ಲಿದೆ ಮೇಕಿಂಗ್ ವಿಡಿಯೋ

Updated on: May 14, 2026 | 9:30 PM

‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್ ಅವರಿಗೆ ಕನ್ನಡ ಮಾತ್ರವಲ್ಲದೇ ಪರಭಾಷೆಯ ಚಿತ್ರರಂಗಗಳಲ್ಲೂ ಬೇಡಿಕೆ ಇದೆ. ರಾಮ್ ಚರಣ್ ಅಭಿನಯದ ‘ಪೆದ್ದಿ’ ಸಿನಿಮಾದಲ್ಲಿ ಶಿವಣ್ಣ ಒಂದು ಪವರ್​ಫುಲ್ ಪಾತ್ರ ಮಾಡಿದ್ದಾರೆ. ಈ ಬಹುನಿರೀಕ್ಷಿತ ಸಿನಿಮಾ ಜೂನ್ 4ರಂದು ಬಿಡುಗಡೆ ಆಗಲಿದೆ. ಶೀಘ್ರದಲ್ಲೇ ಟ್ರೇಲರ್ ರಿಲೀಸ್ ಆಗಲಿದೆ.

ನಟ ಶಿವರಾಜ್​ಕುಮಾರ್ ಅವರಿಗೆ ಕನ್ನಡ ಮಾತ್ರವಲ್ಲದೇ ಪರಭಾಷೆಯ ಚಿತ್ರರಂಗದಲ್ಲೂ ಬೇಡಿಕೆ ಇದೆ. ರಾಮ್ ಚರಣ್ ಅಭಿನಯದ ‘ಪೆದ್ದಿ’ (Peddi) ಸಿನಿಮಾದಲ್ಲಿ ಶಿವಣ್ಣ ಒಂದು ಪವರ್​ಫುಲ್ ಪಾತ್ರ ಮಾಡಿದ್ದಾರೆ. ಈ ಬಹುನಿರೀಕ್ಷಿತ ಸಿನಿಮಾ ಜೂನ್ 4ರಂದು ಬಿಡುಗಡೆ ಆಗಲಿದೆ. ಈಗ ಈ ಸಿನಿಮಾದ ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ. ಮೇ 18ರಂದು ‘ಪೆದ್ದಿ’ ಚಿತ್ರದ ಟ್ರೇಲರ್ ರಿಲೀಸ್ ಆಗಲಿದೆ. ಶಿವರಾಜ್​ಕುಮಾರ್ (Shivarajkumar) ಅವರ ಪಾತ್ರ ಹೇಗಿರಲಿದೆ ಎಂಬುದರ ಝಲಕ್ ತೋರಿಸಲು ಈ ಸಣ್ಣ ವಿಡಿಯೋ ತುಣುಕನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಮೇಕಿಂಗ್ ವಿಡಿಯೋದಲ್ಲಿ ಶಿವರಾಜ್​ಕುಮಾರ್, ರಾಮ್ ಚರಣ್ (Ram Charan) ಅವರು ಜೊತೆಯಾಗಿ ಕೆಲಸ ಮಾಡುತ್ತಿರುವುದು ಕಾಣಿಸಿದೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More