‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ಹೆಮ್ಮೆಯಿಂದ ಹೇಳಿದ ರಿಷಬ್

Updated on: Feb 23, 2026 | 8:31 AM

ರಿಷಬ್ ಶೆಟ್ಟಿ ಅವರು ‘ಜೈ ಹನುಮಾನ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ಮುಹೂರ್ತ ಹಂಪಿಯ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ. ಈ ಸಿನಿಮಾ ಬಗ್ಗೆ ರಾಮ ಹಾಗೂ ಹನುಮ ಭಕ್ತರು ಖುಷಿ ಪಡುತ್ತಾರೆ ಎಂದು ಅವರು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ.

‘ಜೈ ಹನುಮಾನ್’ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಅವರು ಹನುಮಂತನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಹನುಮಂತ ಹುಟ್ಟಿದ ಹಂಪಿಯ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ. ರಿಷಬ್ ಅವರು ಕಾಲ್ನಡಿಗೆಯಲ್ಲೇ ಬೆಟ್ಟ ಏರಿದರು. ಮುಹೂರ್ತದ ಬಳಿಕ ಮಾತನಾಡಿದ ಅವರು, ‘ಈ ಚಿತ್ರದಿಂದ ರಾಮ ಹಾಗೂ ಹನುಮ ಭಕ್ತರಿಗೆ ಖುಷಿ ಆಗಲಿದೆ’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Feb 23, 2026 08:30 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More