ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಿದ ಅರುಣ್ರನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಬಂದ ರಾಮ ಭಕ್ತರು
ಅಯೋಧ್ಯೆ ಬಾಲರಾಮನ ಮೂರ್ತಿಯ ಕೆತ್ತನೆ ಮಾಡಿದ ಅರುಣ್ ಯೋಗಿರಾಜ್ ಅವರು ಅಯೋಧ್ಯೆಯಿಂದ ಕರ್ನಾಟಕಕ್ಕೆ ಹೊರಟಿದ್ದು, ಇಂದು ಸಂಜೆ 5.30 ಗಂಟೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ಗೆ ಆಗಮಿಸಲಿದ್ದಾರೆ. ಹೀಗಾಗಿ ಈ ಸಂದರ್ಭದಲ್ಲಿ ಹಿಂದೂ ಸಮಾಜದ ಮುಖಂಡರು ಮತ್ತು ಪ್ರಮುಖರು ಅವರಿಗೆ ಭವ್ಯ ಸ್ವಾಗತ ಕೋರಲಿದ್ದಾರೆ.
ದೇವನಹಳ್ಳಿ, ಜನವರಿ 24: ಅಯೋಧ್ಯೆಯ ಪುಣ್ಯಭೂಮಿಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ ಅದ್ಧೂರಿಯಾಗಿ ನೆರವೇರಿದೆ. ಈಗ ಇಡೀ ಭಾರತವಲ್ಲದೇ ವಿಶ್ವದ ರಾಮಭಕ್ತರು ಅಯೋಧ್ಯೆಯ ಶ್ರೀರಾಮಲಲ್ಲಾನ ದರ್ಶನಕ್ಕೆ ತುದಿಗಾಲಿನ ಮೇಲೆ ನಿಂತಿದಾರೆ. ಇನ್ನು ಅಯೋಧ್ಯೆ ಬಾಲರಾಮನ ಮೂರ್ತಿಯ ಕೆತ್ತನೆ ಮಾಡಿದ ಶ್ರೀ ಅರುಣ್ ಯೋಗಿರಾಜ್ (Arun Yogiraj) ಅವರು ಅಯೋಧ್ಯೆಯಿಂದ ಕರ್ನಾಟಕಕ್ಕೆ ಹೊರಟಿದ್ದು, ಇಂದು ಸಂಜೆ 5.30 ಗಂಟೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ಗೆ ಆಗಮಿಸಲಿದ್ದಾರೆ. ಹೀಗಾಗಿ ಈ ಸಂದರ್ಭದಲ್ಲಿ ಹಿಂದೂ ಸಮಾಜದ ಮುಖಂಡರು ಮತ್ತು ಪ್ರಮುಖರು ಅವರಿಗೆ ಭವ್ಯ ಸ್ವಾಗತ ಕೋರಲಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.