ಮಂಗಳೂರಿನಲ್ಲಿ ರಂಜಾನ್ ಸಂಭ್ರಮ: ಸಾಮೂಹಿಕ ಪ್ರಾರ್ಥನೆಯಲ್ಲಿ ವಿಧಾನಸಭೆ ಸ್ಪೀಕರ್ ಖಾದರ್ ಭಾಗಿ

Edited By:

Updated on: Mar 31, 2025 | 10:13 AM

ದಕ್ಷಿಣ ಕನ್ನಡದಲ್ಲಿ ರಂಜಾನ್ ಹಬ್ಬದ ಸಂಭ್ರಮ ಮುಗಿಲುಮುಟ್ಟಿದೆ. ಮಂಗಳೂರಿನ ಬಾವುಟಗುಡ್ಡೆ ಈದ್ಗಾ ಮಸೀದಿಯಲ್ಲಿ ವಿಶೇಷ ನಮಾಜ್ ನಡೆಯಿತು. ಸಾಮೂಹಿಕ ಪ್ರಾರ್ಥನೆಯಲ್ಲಿ ಕರ್ನಾಟಕ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಭಾಗವಹಿಸಿ ಶುಭಾಶಯ ಕೋರಿದರು. ಈದ್ಗಾ ಮಸೀದಿಯಲ್ಲಿ ನಡೆದ ರಂಜಾನ್ ವಿಶೇಷ ಪ್ರಾರ್ಥನೆಯ ವಿಡಿಯೋ ಇಲ್ಲಿದೆ.

ಮಂಗಳೂರು, ಮಾರ್ಚ್ 31: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಂಜಾನ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಜಿಲ್ಲೆಯ ಅನೇಕ ಮಸೀದಿಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ವಿಶೇಷ ಪ್ರಾರ್ಥನೆ, ನಮಾಜ್ ನೆರವೇರಿತು. ಮಂಗಳೂರಿನ ಬಾವುಟಗುಡ್ಡೆ ಈದ್ಗಾ ಮಸೀದಿಯಲ್ಲಿ ವಿಶೇಷ ನಮಾಜ್ ನೆರೆವೇರಿತು. ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಕೂಡ ವಿಶೇಷ ಪ್ರಾರ್ಥನೆಯಲ್ಲಿ ಭಾಗವಹಿಸಿ ಶುಭ ಹಾರೈಸಿದರು. ಮುಸ್ಲಿಮರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ