Ramalinga Reddy Pressmeet Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ

Updated on: Jun 05, 2026 | 9:20 AM

ರಾಮಲಿಂಗಾ ರೆಡ್ಡಿ ಪತ್ರಿಕಾಗೋಷ್ಠಿ ನೇರ ಪ್ರಸಾರ: ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ತಮಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದಿದ್ದಕ್ಕೆ ತೀವ್ರ ಬೇಸರಗೊಂಡಿರುವ ಸಚಿವ ರಾಮಲಿಂಗಾ ರೆಡ್ಡಿ ಕೋರಮಂಗಲದ ನಿವಾಸದಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಸಚಿವರ ಸುದ್ದಿಗೋಷ್ಠಿಯ ನೇರ ಪ್ರಸಾರ ಇಲ್ಲಿದೆ.

ಬೆಂಗಳೂರು, ಜೂನ್ 5: ಜಲಸಂಪನ್ಮೂಲ ಖಾತೆ ಸಚಿವ ರಾಮಲಿಂಗಾ ರೆಡ್ಡಿ ಸಚಿವ ಸಂಪುಟದಲ್ಲಿ ತಮಗೆ ಬೇಕಾದ ಖಾತೆ ಸಿಗದ ಬಗ್ಗೆ ತೀವ್ರ ಅಸಮಾಧಾನ ಹೊಂದಿದ್ದಾರೆ. ಈ ವಿಚಾರವಾಗಿ ಅವರು ಗುರುವಾರವೇ ಸಿಎಂ ಡಿಕೆ ಶಿವಕುಮಾರ್ ಜತೆ ಮಾತುಕತೆ ನಡೆಸಿದ್ದರು. ಆದಾಗ್ಯೂ ಅವರಿಗೆ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಲಾಗಿದೆ. ಈ ವಿಚಾರವಾಗಿ ತೀವ್ರ ಅಸಮಾಧಾನಗೊಂಡಿರುವ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ವಿಚಾರವಾಗಿ ಬೆಂಗಳೂರಿನ ಕೋರಮಂಗಲದ ನಿವಾಸದಲ್ಲಿ ಅವರು ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ. ಸುದ್ದಿಗೋಷ್ಠಿಯ ನೇರ ಪ್ರಸಾರ ಇಲ್ಲಿದೆ.

ಏತನ್ಮಧ್ಯೆ, ಮೊದಲ ಪಟ್ಟಿಯಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆ ದಿನೇಶ್ ಗುಂಡೂರಾವ್, ಸಂತೋಷ್ ಲಾಡ್, ಹೆಚ್​.ಕೆ.ಪಾಟೀಲ್, ಜಮೀರ್ ಅಹ್ಮದ್, ಮಧು ಬಂಗಾರಪ್ಪ ಕೂಡ ತೀವ್ರ ಬೇಸರಗೊಂಡಿದ್ದಾರೆ. ಇಲಾಖೆಗಳನ್ನು ಸಮರ್ಥವಾಗಿ ನಿಭಾಯಿಸಿದರೂ ಸ್ಥಾನ ಸಿಗದ ಬಗ್ಗೆ ಅಸಮಾಧಾನ ಹೊಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More