ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ ಡಿಕೆಶಿ

Updated on: Jun 05, 2026 | 10:43 AM

ಖಾತೆ ಹಂಚಿಕೆಯಿಂದ ಅಸಮಾಧಾನಗೊಂಡ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆ ಸಿಗದಿದ್ದಕ್ಕೆ ಬೇಸರಗೊಂಡ ರೆಡ್ಡಿ ನಿರ್ಧಾರ ಕಾಂಗ್ರೆಸ್‌ನಲ್ಲಿ ತಲ್ಲಣ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡಲೇ ಅಖಾಡಕ್ಕಿಳಿದು, ರೆಡ್ಡಿ ಅವರ ಮನವೊಲಿಸಲು "ಡ್ಯಾಮೇಜ್ ಕಂಟ್ರೋಲ್" ಕಸರತ್ತು ಆರಂಭಿಸಿದ್ದಾರೆ. ಸಮಸ್ಯೆ ಶೀಘ್ರ ಬಗೆಹರಿಸುವುದಾಗಿ ಸಿಎಂ ಹೇಳಿದ್ದಾರೆ.

ಬೆಂಗಳೂರು, ಜೂ.5: ಖಾತೆ ಹಂಚಿಕೆಯ ಬೆನ್ನಲ್ಲೇ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಕಾಂಗ್ರೆಸ್ ವಲಯದಲ್ಲಿ ತಲ್ಲಣ ಮೂಡಿಸಿದೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಕ್ಷಣವೇ ಅಖಾಡಕ್ಕಿಳಿದಿದ್ದು, ಬಂಡಾಯ ಶಮನಗೊಳಿಸಲು ‘ಡ್ಯಾಮೇಜ್ ಕಂಟ್ರೋಲ್’ ಕಸರತ್ತು ಆರಂಭಿಸಿದ್ದಾರೆ. ರಾಮಲಿಂಗಾ ರೆಡ್ಡಿ ಅವರ ರಾಜೀನಾಮೆ ನಿರ್ಧಾರದ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಡಿ.ಕೆ. ಶಿವಕುಮಾರ್, “ರಾಮಲಿಂಗಾರೆಡ್ಡಿ ಅವರು ನನಗೆ ತುಂಬಾ ಆತ್ಮೀಯರು. ಪಕ್ಷ ಮತ್ತು ಸರ್ಕಾರದ ಬೆಳವಣಿಗೆಯಲ್ಲಿ ಅವರ ಪಾತ್ರ ದೊಡ್ಡದಿದೆ. ಉಂಟಾಗಿರುವ ಅಸಮಾಧಾನದ ಕುರಿತು ನಾನು ಖುದ್ದಾಗಿ ಅವರ ಜೊತೆ ಕುಳಿತು ಚರ್ಚಿಸಿ, ಎಲ್ಲಾ ಸಮಸ್ಯೆಗಳನ್ನು ಶೀಘ್ರದಲ್ಲೇ ಬಗೆಹರಿಸುತ್ತೇನೆ” ಎಂದು ಹೇಳಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆ ಸಿಗಲಿಲ್ಲ ಎಂಬ ಕಾರಣಕ್ಕೆ ರೆಡ್ಡಿ ಅವರು ತೀವ್ರ ಬೇಸರಗೊಂಡಿದ್ದಾರೆ ಎನ್ನಲಾಗಿದ್ದು, ಮುಖ್ಯಮಂತ್ರಿಗಳು ಅವರ ಮನವೊಲಿಸುವಲ್ಲಿ ಎಷ್ಟರಮಟ್ಟಿಗೆ ಯಶಸ್ವಿಯಾಗಲಿದ್ದಾರೆ ಎಂಬುದನ್ನು ನೋಡಬೇಕಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us