AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್‌ ದರ ಹೆಚ್ಚಾಗುತ್ತಾ? ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?

ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್‌ ದರ ಹೆಚ್ಚಾಗುತ್ತಾ? ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?

ಅಕ್ಷಯ್​ ಪಲ್ಲಮಜಲು​​
|

Updated on: Mar 21, 2026 | 6:24 PM

Share

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾದರೂ ಬಸ್ ಟಿಕೆಟ್‌ ದರ ಹೆಚ್ಚಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇಂಧನ ಬೆಲೆ ಏರಿಕೆಗೆ ಯುದ್ಧ ಕಾರಣ ಎಂದಿರುವ ಸಚಿವರು, ಈ ಹಿಂದೆ ಕಚ್ಚಾ ತೈಲ ಬೆಲೆ ಇಳಿದಾಗ ಕೇಂದ್ರ ಸರ್ಕಾರ ಜನರಿಗೆ ಲಾಭ ತಲುಪಿಸಲಿಲ್ಲ ಎಂದು ಆರೋಪಿಸಿದ್ದಾರೆ. ಸದ್ಯಕ್ಕೆ ದರ ಏರಿಕೆಗೆ ಅವಕಾಶವಿಲ್ಲ ಎಂದಿದ್ದಾರೆ.

ಬೆಂಗಳೂರು, ಮಾ.21: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದ್ದರೂ ರಾಜ್ಯದಲ್ಲಿ ಬಸ್ ಟಿಕೆಟ್‌ ದರವನ್ನು ಹೆಚ್ಚಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಟಿಕೆಟ್ ದರ ಏರಿಸಲು ಸದ್ಯಕ್ಕೆ ಅಧಿಕಾರವಿಲ್ಲ ಎಂದು ತಿಳಿಸಿರುವ ಸಚಿವರು, ದರ ಹೆಚ್ಚಳದ ನಿರ್ಧಾರವನ್ನು ತಿರಸ್ಕರಿಸಿದ್ದಾರೆ. ಇಂಧನ ಬೆಲೆ ಏರಿಕೆಗೆ ಜಾಗತಿಕ ಯುದ್ಧದ ಪರಿಸ್ಥಿತಿಯೇ ಕಾರಣ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಯುದ್ಧ ನಿಂತರೆ ಬೆಲೆಗಳು ತಾನಾಗಿಯೇ ಕಡಿಮೆಯಾಗುತ್ತವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರಾಮಲಿಂಗಾರೆಡ್ಡಿ, ಹಿಂದಿನ ದಿನಗಳಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆಯಾಗಿದ್ದಾಗಲೂ ಕೇಂದ್ರ ಸರ್ಕಾರ ಜನರಿಗೆ ಯಾವುದೇ ಪ್ರಯೋಜನವನ್ನು ತಲುಪಿಸಲಿಲ್ಲ ಎಂದು ಆರೋಪಿಸಿದರು. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ 100-130 ಡಾಲರ್ ಇದ್ದ ಕಚ್ಚಾ ತೈಲಕ್ಕೆ ಸಬ್ಸಿಡಿ ನೀಡಲಾಗಿತ್ತು. ಆದರೆ, ಆ ನಂತರದ 10-12 ವರ್ಷಗಳ ಕಾಲ ಕಚ್ಚಾ ತೈಲ ಬೆಲೆ ಕಡಿಮೆಯಾಗಿದ್ದಾಗಲೂ ಕೇಂದ್ರ ಸರ್ಕಾರ ಲಾಭ ಮಾಡಿಕೊಂಡಿತೇ ಹೊರತು ಜನರಿಗೆ ಇದರ ಲಾಭ ಸಿಗಲಿಲ್ಲ ಎಂದು ಹೇಳಿದರು. ರಾಜ್ಯ ಸರ್ಕಾರ ಬಸ್ ದರ ಹೆಚ್ಚಿಸುವುದಿಲ್ಲ, ಕೇಂದ್ರ ಸರ್ಕಾರ ಇಂಧನ ಬೆಲೆ ಹೆಚ್ಚಳ ಮಾಡಬಹುದು ಎಂದು ಅವರು ಪುನರುಚ್ಚರಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More