ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಮಾಜಿ ಸಿಎಂ ಎಸ್.ಎಂ.ಕೃಷ್ಣ; ಕಾರ್ಯಕರ್ತರಿಂದ ವಿಶೇಷ ಪೂಜೆ
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಅನಾರೋಗ್ಯ ಹಿನ್ನೆಲೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಸಿದ್ದರಾಮಯ್ಯಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದರು.
ರಾಮನಗರ: ಮಾಜಿ ಸಿಎಂ ಆಗಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರಿಗೆ ಅನಾರೋಗ್ಯ ಹಿನ್ನೆಲೆ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಪೂಜೆ ಮಾಡಿದರು. ರಾಮನಗರದ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಕೈ ಕಾರ್ಯಕರ್ತರು, 101 ಈಡುಗಾಯಿ ಹೊಡೆದು ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು. ಕಾಂಗ್ರೆಸ್ ಎಂಎಲ್ಸಿ ಸಿ.ಎಂ ಲಿಂಗಪ್ಪ ನೇತೃತ್ವದಲ್ಲಿ ಪೂಜೆ ನಡೆಯಿತು. ಇನ್ನು ಮಾಜಿ ಮುಖ್ಯಮಂತ್ರಿಯಾಗಿರುವ ಬಿಜೆಪಿಯ ಎಸ್.ಎಂ.ಕೃಷ್ಣ (S.M.Krishna) ಅವರು ಸಿದ್ದರಾಮಯ್ಯ ಅವರಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದರು. ಚಾಮುಂಡೇಶ್ವರಿ ದೇವಿಯ ಆಶೀರ್ವಾದದಿಂದ ಬೇಗ ಚೇತರಿಸಿಕೊಳ್ಳಿ ಎಂದು ಹಾರೈಸಿದರು.
ಮತ್ತಷ್ಟು ವಿಡಿಯೋ ಸ್ಟೋರಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Published on: Dec 03, 2022 01:26 PM
Latest Videos