ಶಿಕ್ಷಕರು ಬೈದಿದ್ದಕ್ಕೆ 10ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ರಾತ್ರೋರಾತ್ರಿ ಹಾಸ್ಟೆಲ್‌ನಿಂದ ಪರಾರಿ
ಮುಖ್ಯಾಂಶಗಳು
- ವಸತಿ ಶಾಲೆಯಿಂದ ನಾಲ್ವರು ವಿದ್ಯಾರ್ಥಿಗಳು ಎಸ್ಕೇಪ್
- ಶಿಕ್ಷಕರು ಬೈದರು ಎಂಬ ಕಾರಣಕ್ಕೆ ವಸತಿ ಶಾಲೆಯಿಂದ ಎಸ್ಕೇಪ್
- ಈ ಸಂಬಂಧ ಐಜೂರು ಠಾಣೆಗೆ ದೂರು ನೀಡಿದ ಪ್ರಾಂಶುಪಾಲೆ
ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಿಂದ ನಾಲ್ವರು 10ನೇ ತರಗತಿ ವಿದ್ಯಾರ್ಥಿಗಳು ಎಸ್ಕೇಪ್ ಆಗಿದ್ದಾರೆ. ಶಿಕ್ಷಕರು ಬೈದ ಕಾರಣಕ್ಕೆ ರಾತ್ರಿ 10 ಗಂಟೆ ಸುಮಾರಿಗೆ ಕಾಂಪೌಂಡ್ ಹಾರಿ ವಿದ್ಯಾರ್ಥಿಗಳು ಪರಾರಿಯಾಗಿದ್ದಾರೆ. ಪ್ರಾಂಶುಪಾಲೆ ಐಜೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಶಾಲಾ ಆಡಳಿತ ಮಂಡಳಿಯು ವಿದ್ಯಾರ್ಥಿಗಳ ಪತ್ತೆಗೆ ಕ್ರಮ ಕೈಗೊಂಡಿದೆ.
ರಾಮನಗರ, ನವೆಂಬರ್ 19: ಶಿಕ್ಷಕರು ಬೈದರು ಎಂಬ ಕಾರಣಕ್ಕೆ ನಾಲ್ವರು ವಿದ್ಯಾರ್ಥಿಗಳು ಹಾಸ್ಟೆಲ್‌ನಿಂದ ಪರಾರಿಯಾಗಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ನಡೆದಿದೆ. ರಾಮನಗರದ ಕೆಂಪೇಗೌಡ ಸರ್ಕಲ್ ಬಳಿ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ಬುಧವಾರ ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಹಾಸ್ಟೆಲ್‌ನಿಂದ ಪರಾರಿಯಾಗಿದ್ದಾರೆ. ಶಿಕ್ಷಕರು ಬೈದರು ಎಂಬ ಕಾರಣಕ್ಕೆ ಮನನೊಂದು ರಾತ್ರಿ ವೇಳೆ ಶಾಲೆಯ ಕಾಂಪೌಂಡ್ ಹಾರಿ ಹೊರಹೋಗಿದ್ದಾರೆ. ವಿದ್ಯಾರ್ಥಿಗಳು ನಾಪತ್ತೆಯಾಗಿರುವ ಸಂಬಂಧ ವಸತಿ ಶಾಲೆಯ ಪ್ರಾಂಶುಪಾಲರು ರಾಮನಗರದ ಐಜೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Nov 19, 2026 05:50 PM
Loading...
Unable to load recommendations.
Follow Us