ರಾಮನಗರ: ಹಾಲು ನೀಡುವ ಗೋಮಾತೆಗೆನೇ ಹಾಲುಣಿಸಿದ ನಾಯಿ-ವಿಡಿಯೋ ವೈರಲ್​

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ Edited By: ಕಿರಣ್ ಹನುಮಂತ್​ ಮಾದಾರ್

Updated on: Feb 15, 2024 | 9:09 PM

ಬಾಲಕರಿಬ್ಬರು ಫುಟ್ಬಾತ್​​​ನಲ್ಲಿ ಮಲಗಿದ್ದ ಗೋವನ್ನು ಕಂಡು, ಗೋಮಾತೆಗೆ ಭಕ್ತಿಯಿಂದ ಕೈಮುಗಿದು ನಮಸ್ಕರಿಸುವ ವೀಡಿಯೊ ತುಣುಕು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದರ ಬೆನ್ನಲ್ಲೇ ಇದೀಗ ಪ್ರಪಂಚಕ್ಕೆ ಹಾಲುಣಿಸುವ ಗೋಮಾತೆಗೆಯೇ ನಾಯಿಯೊಂದು ಹಾಲುಣಿಸಿದ ವಿಚಿತ್ರ ಘಟನೆ ರಾಮನಗರ(Ramanagara) ತಾಲೂಕಿನ ಯರೇಹಳ್ಳಿ ಗ್ರಾಮದಲ್ಲಿ ನಡೆದಿದೆ.

ರಾಮನಗರ, ಫೆ.15: ಹಿಂದೂ ಧರ್ಮದಲ್ಲಿ ಗೋವನ್ನು(cow)ದೇವರ ಸ್ವರೂಪದಲ್ಲಿ ಕಾಣುತ್ತೇವೆ. ಅದರಿಂದ ಸಿಗುವ ಹಾಲನ್ನು ಅಮೃತವೆಂದು ಸ್ವೀಕರಿಸುತ್ತೇವೆ. ಪ್ರಪಂಚಕ್ಕೆ ಹಾಲುಣಿಸುವ ಗೋಮಾತೆಗೆಯೇ ನಾಯಿಯೊಂದು ಹಾಲುಣಿಸಿದ ವಿಚಿತ್ರ ಘಟನೆ ರಾಮನಗರ(Ramanagara) ತಾಲೂಕಿನ ಯರೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಾವಿತ್ರಮ್ಮ ಎಂಬುವವರಿಗೆ ಸೇರಿದ ಈ ಕರು, ನಾಯಿಯ ಬಳಿ ಹಾಲು ಕುಡಿದಿದೆ. ನಾಯಿ ಹಾಗೂ ಕರುವಿನ ಬಾಂಧವ್ಯಕ್ಕೆ ಅಚ್ಚರಿಗೊಂಡ ಗ್ರಾಮಸ್ಥರು, ನಾಯಿ ಬಳಿ ಕರು ಹಾಲು ಕುಡಿಯುವ ವೀಡಿಯೋವನ್ನು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಫುಲ್​ ವೈರಲ್ ಆಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ